CrimeNEWSನಮ್ಮರಾಜ್ಯ

ಗಾಂಜಾ ಮಾರುತ್ತಿದ್ದ ಇಬ್ಬರು ಬಿಎಂಟಿಸಿ ನೌಕರರ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್ ಗಳಲ್ಲಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಬಿಎಂಟಿಸಿ ನೌಕರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತ ಆರೋಪಿಗಳು. ಬಿಎಂಟಿಸಿಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿರುವ ಆರೋಪಿಗಳಿಬ್ಬರೂ ಕೂಡ ಕೆಲಸ ನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶ ಹಿನ್ನೆಲೆ ಕಲಬುರಗಿಯಿಂದ ಗಾಂಜಾ ತಂದು ಬೆಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು.

ಬಂಧಿತರಿಂದ 9.8 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶವನ್ನು ಅಡ್ಡೆ ಮಾಡಿಕೊಂಡಿದ್ದ ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಕಳೆದ ಮೂರು ವರ್ಷಗಳಿಂದ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದರು.

ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಕೆ.ಜಿ.ಗೆ 40 ರಿಂದ 50 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದ್ದು, ಇಬ್ಬರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಸರ್ಕಾರಿ ಕೆಲಸದಲ್ಲಿದ್ದುಕೊಂಡು ಈ ಕೃತ್ಯ ಎಸಗುತ್ತಿದ್ದರು ಎಂದರೆ ಇವರ ಇಂದೆ ಯಾರು ಯಾರು ಇದ್ದಾರೆ ಎಂಬುದನ್ನು ಪೊಲೀಸರು ಬಯಲಿಗೆಳೆಯಬೇಕಿದೆ. ಏಕೆಂದರೆ ಈ ಇಬ್ಬರಿಂದಲೇ ಈ ದಂಧೆ ನಡೆಸಲು ಸಾಧ್ಯವಿಲ್ಲ, ಕಾಣದ ಕೈಗಳು ಇದರ ಹಿಂದೆ ಇವೆ. ಅವುಗಳ ಬಗ್ಗೆ ಪೊಲೀಸರು ಸಮಗ್ರ ವಿಚಾರಣೆ ನಡೆಸಬೇಕು. ಆ ನಂತರವೇ ಸತ್ಯ ಹೊರಬೀಳಲಿದೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ