ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಇದೀಗ ಈ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಕೆದಕಿದಷ್ಟು ರೋಚಕ ವಿಷಯಗಳು ಬಯಲಿಗೆ ಬರುತ್ತಿವೆ.
ಆಗಸ್ಟ್ 12 ರಾತ್ರಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ 2 ಕಾರ್‌ಗೆ ಬೆಂಕಿ ಹಚ್ಚಲಾಗಿತ್ತು. ಈ ಸಂಬಂಧ ಒಂದೆಡೆ ಖಾಕಿ ಆರೋಪಿಗಳ ಹುಡುಕಾಟದಲ್ಲಿ ನಿರತವಾಗಿದ್ದರೆ, ಇತ್ತ ಪಕ್ಕದ ರೋಡಲ್ಲೇ ಆರೋಪಿಗಳ ರೌಂಡ್ಸ್ ಹೊಡೆಯುತ್ತಿದ್ದಾರೆ.
ಮಧ್ಯರಾತ್ರಿ ಸುಮಾರು 1:30ಕ್ಕೆ ಬೆಂಕಿ ಹಚ್ಚಿ, 2:30ಕ್ಕೆ ಪಕ್ಕದ ರಸ್ತೆಯಲ್ಲೇ ಇದ್ದರಂತೆ. ಮನೆ ಮುಂದಿರೋ ಬೈಕ್‍ಗಳ ಕಳ್ಳತನಕ್ಕೆ ಆರೋಪಿಗಳು ಸರ್ಕಸ್ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
2:32ಕ್ಕೆ ಪ್ಲಾಟಿನಾ ಬೈಕ್ ಕದ್ದು ಆರೋಪಿಗಳು ಕಾಲ್ಕಿತ್ತಿದ್ದಾರೆ. ಆರೋಪಿಗಳ ಬೈಕ್ ಕಳ್ಳತನದ ಫುಲ್‍ಸೀನ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಒಂದಲ್ಲ, ಎರಡಲ್ಲ 80 ಸಿಸಿ ಕ್ಯಾಮರಾದಲ್ಲಿ ಆರೋಪಿಗಳ ಚಲನವಲನಗಳು ಸೆರೆಯಾಗಿದೆ. ಇದುವರೆಗೆ 50ಕ್ಕೂ ಹೆಚ್ಚು ಸಿಸಿಕ್ಯಾಮರಾಗಳ ಪರಿಶೀಲನೆ ಮಾಡಲಾಗಿದೆ.
ಇನ್ನು ಈ ನಡುವೆ ಶಾಸಕ ಸತೀಶ್ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಆ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದು, ಅದನ್ನು ಪೊಲೀಸರು ಶೀಘ್ರದಲ್ಲೇ ಬಯಲು ಮಾಡಲಿದ್ದಾರೆ.
ಜತೆಗೆ ಈ ಪ್ರಕರಣ ಸಂಬಂಧ ನನಗೂ ಅನುಮಾನವಿದ್ದು, ಈ ಬಗ್ಗೆ ಗೃಹ ಸಚಿವರನ್ನು ಭೇಟಿಯಾಗಿ ಅವರಿಗೆ ವಿಷಯ ತಿಳಿಸುತ್ತೇನೆ ಎಂದು ಹೇಳಿದರು.
ಇನ್ನು ಆರೋಪಿಗಳಲ್ಲಿ ಒಬ್ಬ ವಿದೇಶಿಗ ಆತ ನನ್ನನ್ನು ಭೇಟಿ ಮಾಡಲು ಬಂದಿಲ್ಲ. ಆ ಮೂವರು ಕೇಬಲ್‌ನಲ್ಲಿ ಕೆಲಸ ಮಡುತ್ತಿದ್ದರು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ನಮ್ಮ ಕ್ಷೇತ್ರದಲ್ಲಿ ಕಾನೂನು ಬಾಹೀರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡದಿರುವುದು ಈ ಕೃತ್ಯ ಎಸಗಲು ಕಾರಣ ಇರಬಹುದೇನೋ ಎಂಬ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದ್ದಾರೆ.
ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್