CrimeNEWSದೇಶ-ವಿದೇಶವಿದೇಶ

ಕೆರೆಬಿಯನ್‌ನಲ್ಲಿ ಭೂಕಂಪ : ನೂರಾರು ಮಂದಿ ಮೃತ: ಅವಶೇಷಗಳಡಿ ಸಿಲುಕಿರುವ ನೂರಾರು ಜನರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪೋರ್ಟ್‌ ಔ ಪ್ರಿನ್ಸ್‌: ಕೆರೆಬಿಯನ್‌ ರಾಷ್ಟ್ರದ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 320ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಮನೆಗಳು ಧರೆಗುರುಳಿವೆ.

ರಿಕ್ಟರ್‌ ಮಾಪಕದಲ್ಲಿ 7.2ರಷ್ಟು ಭೂ ಕಂಪನದ ತೀವ್ರತೆ ದಾಖಲಾಗಿದ್ದು, ಕ್ಷಣ ಮಾತ್ರಲ್ಲೇ ನೂರಾರು ಕಟ್ಟಡಗಳು ನೆಲಕಚ್ಚದನ್ನು ಕಂಡು ಹಲವರು ಭಯಭೀತರಾಗಿ ದಿಕ್ಕಪಾಲಾಗಿ ಓಡಾಡಿದ್ದಾರೆ.

ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಈ ಭೂಕಂಪ ಸಂಭವಿಸಿದ್ದು, ಈ ಪ್ರಕೃತಿ ವಿಕೋಪಕ್ಕೆ ಇಂದು ಸಾವಿರಾರು ಜನ ಬೀದಿಗೆ ಬೀಳುವಂತಾಗಿದೆ.

ಇನ್ನು ಭೂಕಂಪವಾಗುತ್ತಿದ್ದಂತೆ ಮನೆಯೊಳಗಿದ್ದ ಸಾವಿರಾರು ಮಂದಿ ತಮ್ಮ ತಮ್ಮ ಮನೆಗಳಿಂದ ಹೊರಗೆ ಓಡೋಡಿ ಬಂದಿದ್ದಾರೆ. ಆದರೆ ಮನೆಯಲ್ಲೇ ಇದ್ದವರು ಅವಶೇಷಗಳಡಿ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ನೂರಾರು ಮಂದಿ ಭೂಕಂಪಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇನ್ನು ಭೂಕಂಪದಿಂದ ಹೈಟಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Leave a Reply

error: Content is protected !!
LATEST
KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ