NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಶ್ರೀರಾಮುಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆಸಿದ ಮುಷ್ಕರದ ವೇಳೆ ಸಾರಿಗೆ ನೌಕರರಿಗೆ ಆಗಿರುವ ಎಲ್ಲ ತೊಂದರೆಗಳನ್ನು ಸರಿಪಡಿಸಿಕೊಡುತ್ತೇನೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಚಿತ್ರದುರ್ಗದಲ್ಲಿ ಭೇಟಿಯಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದರು.

ಈ ವೇಳೆ ಮುಷ್ಕರದ ಸಮಯದಲ್ಲಿ ನೌಕರರಿಗೆ ಆಗಿರುವ ವಜಾ, ವರ್ಗಾವಣೆ ಮತ್ತು ಅಮಾನತು ಆದೇಶಗಳನ್ನು ಹಿಂಪಡೆಯಬೇಕೆಂದು ಹಾಗೂ ಮೊದಲು ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಿಗೆ ನಿಯೋಜನೆ ಮಾಡಬೇಕು ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್‌ ಮತ್ತು ಪದಾಧಿಕಾರಿಗಳು ಮನವಿ ಮಾಡಿದರು.

ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಾರಿಗೆ ಸಚಿವರು ಆಗಿರುವ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲೇ ಸರಿಪಡಿಸಿಕೊಡುವುದಾಗಿ ಹೇಳಿದರು.

ಜತೆಗೆ ಡಿಪೋ ಮಟ್ಟದಲ್ಲಿ ನಿರಂತರವಾಗಿ ನೌಕರರ ಮೇಲೆ ನಡೆಯುತ್ತಿರುವ ಕಿರುಕುಳವನ್ನು ತಪ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಅಲಿಸಿ ಪರಿಹಾರ ಮಾಡುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ನೌಕರರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಮತ್ತು ನಾಲ್ಕೂ ಸಂಸ್ಥೆಗಳು ಲಾಭದತ್ತ ದಾಪುಗಾಲಿಡಲು ಬೇಕಾದ ಎಲ್ಲ ರೀತಿಯ ಯೋಜನೆಗಳನ್ನು ರೂಪಿಸಲಾಗುವುದು. ಹೀಗಾಗಿ ನೌಕರರು ಎದೆಗುಂದದೆ ನಿಮ್ಮ ಕೆಲಸವನ್ನು ನೀವು ಮಾಡಿ ನಿಮಗೆ ಸರಿಯಾದ ಸಮಯಕ್ಕೆ ವೇತನ ಕೊಡಿಸುವ ಹೊಣೆ ನನ್ನದು ಎಂದು ಭರವಸೆ ನೀಡಿದರು.

ಇನ್ನು ಮುಷ್ಕರದ ವೇಳೆ ನೌಕರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ನೌಕರರಿಗೆ ತೊಂದರೆ ಆಗದಂತೆ ಪರಿಹರಿಸಲಾಗುವುದು. ಜತೆಗೆ ನೆಮ್ಮದಿಯ ಜೀವನ ಸಾಗಿಲು ಬೇಕಾದ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಸಚಿವರಿಗೆ ಮನವಿ ಸಲ್ಲಿಸುವ ವೇಳೆ ದಾವಣಗೆರೆ, ಚಿತ್ರದುರ್ಗ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕೂಟದ ಪದಾಧಿಕಾರಿಗಳು ಇದ್ದರು.

ಸಚಿವರ ಭೇಟಿಗೆ ರಾತ್ರಿ ಇಡಿ ಕಾದ ಕೂಟದ ಪದಾಧಿಕಾರಿಗಳು
ಶನಿವಾರ ರಾತ್ರಿಯೇ ಸಚಿವರನ್ನು ಭೇಟಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಚಿತ್ರದುರ್ಗಕ್ಕೆ ತೆರಳಿದರು. ಆದರೆ, ಸಚಿವರು ಬಳ್ಳಾರಿಯಿಂದ ಪ್ರಯಾಣ ಬೆಳೆಸಿದ್ದರಿಂದ ಆಯಾಸಗೊಂಡಿದ್ದರು. ಹೀಗಾಗಿ ಸಚಿವರನ್ನು ಈಗ ನೋಡಲು ಸಾಧ್ಯವಿಲ್ಲ, ನೀವು ಬೆಳಗ್ಗೆ ಬನ್ನಿ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದರಿಂದ ಕೂಟದ ಪದಾಧಿಕಾರಿಗಳು ರಾತ್ರಿ ಇಡೀ ಅವರಿಗಾಗಿ ಕಾದು ಬೆಳಗ್ಗೆ ಮನವಿ ಪತ್ರ ಸಲ್ಲಿಸಿ ಬಂದಿದ್ದಾರೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ