CrimeNEWSನಮ್ಮಜಿಲ್ಲೆ

ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಒಬ್ಬ ಮೃತ, ಇಬ್ಬರಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಂದನ್(16)  ಮೃತ ವಿದ್ಯಾರ್ಥಿ. ಶಶಾಂಕ್(16) ಮತ್ತು ಪವನ್(22) ಗಾಯಗೊಂಡವರು.

ಗಾಯಾಳುಗಳನ್ನು ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ಚಂದನ್, ಶಶಾಂಕ್, ಪವನ್ ವಿದ್ಯುತ್ ತಗುಲಿತ್ತು.

ಅವರನ್ನು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಂದನ್ ಕೊನೆಯುಸಿರೆಳೆದಿದ್ದಾನೆ.

ಇದೀಗ ಮೃತ ಚಂದನ್ ಕುಟುಂಬಕ್ಕೆ ಇಲಾಖೆಯಿಂದ ಆರ್ಥಿಕ ನೆರವು ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಇಲಾಖೆ ಭರಿಸುತ್ತದೆ ಎಂದು ಡಿಡಿಪಿಐ ನಂಜಪ್ಪ ಹೇಳಿದ್ದಾರೆ.

ಪ್ರಕರಣ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಳುಗಳ ಆರೋಗ್ಯ ವಿಚಾರಿಸಲು ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿದ್ದರು.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ