NEWSನಮ್ಮರಾಜ್ಯರಾಜಕೀಯ

ನಮ್ಮದು ಕಟ್ಟುವ ಪರಂಪರೆ, ಬಿಜೆಪಿಯದ್ದು ಉರುಳಿಸುವ ಪರಂಪರೆ: ಡಿಕೆಶಿ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ ಭವನದಲ್ಲಿ ಭಾನುವಾರ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ನಮ್ಮದು (ಕಾಂಗ್ರೆಸ್‌) ಕಟ್ಟುವ ಪರಂಪರೆ. ಬಿಜೆಪಿಯವರದ್ದು ಉರುಳಿಸುವ ಪರಂಪರೆ ಎಂದು ಟೀಕಿಸಿದರು.

ದೇಶವನ್ನು ಕಟ್ಟಿದ ಮಹನೀಯರ ಹೆಸರು ಬದಲಿಸುವ ಚರ್ಚೆ ನಡೆಯುತ್ತಿದೆ. ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಷಡ್ಯಂತ್ರ ನಡೆದಿದೆ. ಮಹನೀಯರ ಹೆಸರು ಬದಲಿಸಿದರೂ ಅವರು ಜನಮಾನಸದಲ್ಲಿ ಚಿರಸ್ಥಾಯಿ ಎನ್ನುವುದನ್ನು ಮರೆಯಬಾರದು ಎಂದು ತಿಳಿಸಿದರು.

ಇನ್ನು  ಭಾಷಣದ ವೇಳೆ ಎಡವಟ್ಟು ಮಾಡಿಕೊಂಡ ಅವರು,  ಮಾತನಾಡುವ ಬರದಲ್ಲಿ  ಹುತಾತ್ಮರಾದ ಸೋನಿಯಾ ಗಾಂಧಿ ಎಂದು ಬಾಯಿತಪ್ಪಿ ಹೇಳಿ ನಂತರ ಸಾರಿ, ಸಾರಿ ಹುತಾತ್ಮರಾದ ಇಂದಿರಾ ಗಾಂಧಿ ಎಂದು ತಪ್ಪನ್ನು ತಿದ್ದಿಕೊಂಡು ಭಾಷಣವನ್ನು ಮುಂದುವರಿಸಿದರು.

ಬಳಿಕ ದೇಶ ಕಟ್ಟಲು ಎದುರಾದ ಸವಾಲುಗಳನ್ನು ಮೆಟ್ಟಿ ನಿಂತು ಸ್ವಾತಂತ್ರ್ಯಕ್ಕಾಗಿ ಹಿರಿಯರು ಹೋರಾಟ ಮಾಡಿದ್ದಾರೆ. ಆದರೆ ಈಗ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲಾಗುತ್ತಿದ್ದು, ಇದರ ವಿರುದ್ಧ ಹೋರಾಡಬೇಕಾಗಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗ ರೆಡ್ಡಿ, ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಇತರರು ಭಾಗವಹಿಸಿದ್ದರು.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ