ಬೆಂಗಳೂರು: ನಗರದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರಿಗೆ ಸೋಮವಾರ ಆಗಮಿಸಿದ್ದಾರೆ.
ಐದು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಇಂದು ನಗರದ ಜವಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಭಾಗಿಯಾಗಲಿದ್ದಾರೆ.