CrimeNEWSನಮ್ಮಜಿಲ್ಲೆ

ಮೈಸೂರಿನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ವ್ಯಕ್ತಿ ಹತ್ಯೆ!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದಲ್ಲಿ ಭಾವನನ್ನೇ ಭಾಮೈದುನ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದು 24 ಗಂಟೆ ಕಳೆಯುವುದರೊಳಗೇ ಮತ್ತೊಂದು ಕೊಲೆ ನಡೆದಿದ್ದು, ನಗರದ ಜನರನ್ನು ಬೆಚ್ಚಿ ಬೀಳಿಸಿದೆ.

ಸೋಮವಾರ ಗೌಸಿಯಾನಗರದ ನಿವಾಸಿ ಇಬ್ರಾಹಿಂ ಕೊಲೆಯಾದ ವ್ಯಕ್ತಿ.

ಉದಯಗಿರಿ ಠಾಣಾ ವ್ಯಾಪ್ತಿಯ ಗೌಸಿಯಾನಗರದಲ್ಲಿ ತನ್ನ ಮನೆಯ ಮುಂದೆ ನಿಂತಿದ್ದ ಇಬ್ರಾಹಿಂ ಎಂಬಾತನನ್ನು ಮೂವರ ಗುಂಪೊಂದು ಹಾಡಹಗಲೇ ಹೊಟ್ಟೆಗೆ ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಪರಾರಿಯಾಗಿದೆ.

ಕೊಲೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಉದಯಗಿರಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರವಿಕುಮಾರ್, ಸಬ್ ಇನ್‌ಸ್ಪೆಕ್ಟರ್ ಸುನಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ನಗರದಲ್ಲಿ ಈ ರೀತಿ ಕೊಲೆಯಾಗುತ್ತಿರುವುದು ಜನರಲ್ಲ ಆತಂಕವನ್ನು ಹೆಚ್ಚಿಸಿದೆ. ಯಾವ ಕಾರಣಕ್ಕೆ ಈ ರೀತಿ ನಡೆದುಕೊಳ್ಳುತ್ತಿದ್ದಾರೋ ಎಂಬುವುದು ತಿಳಿಯುತ್ತಿಲ್ಲ. ಒಂದು ಕಾಲದಲ್ಲಿ ನಿವೃತ್ತರ ಸ್ವರ್ಗ ಎಂದು ಕರೆಸಿಕೊಳ್ಳುತ್ತಿದ್ದ ನಗರಿಯಲ್ಲಿ ಈಗ ಇಂಥ ಕೃತ್ಯಗಳು ನಡೆಯುತ್ತಿರುವುದು ಪೊಲೀಸರನ್ನು ಕಾಡುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪೊಲೀಸರು ಕೊಲೆಗಾರರನ್ನು ಬಂಧಿಸಿ ತಕ್ಷ ಶಿಕ್ಷಗೆ ಗುರಿಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ