NEWSನಮ್ಮರಾಜ್ಯಶಿಕ್ಷಣ-

1ರಿಂದ 8ನೇ ತರಗತಿಗಳ ಆರಂಭಕ್ಕೂ ಚಿಂತನೆ: ಶಿಕ್ಷಣ ಸಚಿವ ನಾಗೇಶ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: 9, 10 ಹಾಗೂ ಪಿಯುಸಿ ತರಗತಿಯನ್ನು ಕೋವಿಡ್ ಕಾರ್ಯಪಡೆ, ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ ಆರಂಭಿಸಲಾಗುತ್ತಿದ್ದು, ಇದರಲ್ಲಿ ಯಶಸ್ವಿಯಾದರೇ 1 ರಿಂದ 8 ನೇ ತರಗತಿಗಳನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಪೋಷಕರು ಹಾಗೂ ಮಕ್ಕಳ ಧೈರ್ಯ ನೋಡಿ ಶಾಲೆ ತೆರೆಯಲಾಗುತ್ತಿದೆ. ಈಗಾಗಲೇ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದ್ದು, ಮಕ್ಕಳ ಮನವೊಲಿಸಲು ಶಿಕ್ಷಕರಿಗೆ ತಿಳಿಸಲಾಗಿದೆ ಎಂದರು.

ಶೇ.30 ರಿಂದ 40 ರಷ್ಟು ಮಕ್ಕಳು ಆನ್ ಲೈನ್ ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದು ಬಂದಿದೆ. ಆದರೂ ಯಾವುದೇ ಕಾರಣಕ್ಕೂ ಬಲವಂತವಾಗಿ ಮಕ್ಕಳನ್ನು ಶಾಲೆಗೆ ಕರೆತರುವಂತಿಲ್ಲ. ಒಂದು ವೇಳೆ ಪೋಷಕರು ಇದಕ್ಕೆ ಸಹಮತನೀಡದಿದ್ದರೇ, ಆನ್ ಲೈನ್ ತರಗತಿ ಮೂಲಕ ಅವರಿಗೆ ಅಭ್ಯಾಸ ಮುಂದುವರಿಯುವುದು. ಈ ಕುರಿತು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಎಂದರು.

ತರಗತಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಒಂದು ವೇಳೆ ಕೋವಿಡ್ ದೃಢಪಟ್ಟರೇ ಒಂದು ವಾರಗಳ ಕಾಲ ಶಾಲೆ ಮುಚ್ಚಲಾಗುವುದು. ನಂತರ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲಾಗುವುದು ಎಂದರು.

Leave a Reply

error: Content is protected !!
LATEST
LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ