NEWSನಮ್ಮಜಿಲ್ಲೆ

ಗ್ರಾಪಂ ಸ್ವಂತ ಕಟ್ಟಡಕ್ಕಾಗಿ ಕೇಂದ್ರದಿಂದ ಕೋಟ್ಯಂತರ ರೂ. ಅನುದಾನ : ಸಂಸದ ಪ್ರತಾಪ್ ಸಿಂಹ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಸ್ವಂತ ಕಟ್ಟಡವನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೋಟ್ಯಂತರ ರೂ.ಗಳ ಅನುದಾನವನ್ನು ನೀಡುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ತಾಲೂಕಿನ ಅವರ್ತಿ ಗ್ರಾಮದ ರಾಜೀವ್ ಗಾಂಧಿ ಸೇವಾ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿಗಳಿಗೂ ಸ್ವಂತ ಕಟ್ಟಡವನ್ನು ಕಲ್ಪಿಸುವ ನಿಟ್ಟಿನಲ್ಲಿ 14 ಮತ್ತು 15 ನೇ ಹಣಕಾಸು ಯೋಜನೆಯಲ್ಲಿ ಕೇಂದ್ರ ಸರ್ಕಾರ ಅನುದಾನ ನೀಡುತ್ತಿದೆ. 2013ರಕ್ಕೂ ಮೊದಲು ಗ್ರಾಮ ಪಂಚಾಯಿತಿಗಳು ಸರ್ಕಾರ ನೀಡುತ್ತಿದ್ದ ಅನುದಾನ ಕಡಿಮೆ ಇದ್ದ ಕಾರಣ, ಸಮರ್ಪಕವಾದ ಸ್ವಂತ ಕಟ್ಟಡವಿಲ್ಲದೆ ಬಾಡಿಗೆ, ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದ್ದವು.

ಅದನ್ನು ತಿಳಿದ ಸಂಸದರ ನಿಯೋಗ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಗ್ರಾಮಪಂಚಾಯಿತಿಗಳಿಗೆ ಸ್ವಂತ ಕಟ್ಟಡವನ್ನು ನಿರ್ಮಿಸಲು ಸೂಕ್ತ ಹಣಕಾಸು ಸೌಲಭ್ಯವನ್ನು ನೀಡಬೇಕು ಎಂದು ಮನವಿ ಮಾಡಿದಾಗ. ಗ್ರಾಮ ಪಂಚಾಯಿತಿಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣಕ್ಕೆ ಅನುದಾನ ಬಿಡುಗಡೆ ಗೊಳಿಸಿದೆ.

14 ಮತ್ತು 15ನೇ ಹಣಕಾಸಿನ ಯೋಜನೆಯಲ್ಲಿ ಕಟ್ಟಡದ ವಿನ್ಯಾಸಕ್ಕೆ ಅನುಗುಣವಾಗಿ ಅನುದಾನವನ್ನು ಬಿಡುಗಡೆಗೊಳಿಸಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗೆ ಸಕಾಲವಾಗಿದೆ ಎಂದರು.

ಶಾಸಕ ಕೆ.ಮಹದೇವ್ ಮಾತನಾಡಿ ತಾಲೂಕಿನಲ್ಲಿ ಅನೇಕ ಗ್ರಾಮ ಪಂಚಾಯಿತಿಗಳು ಸ್ವಂತ ಕಟ್ಟಡಗಳಿಲ್ಲ ಬಾಡಿಗೆ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದ್ದು , ಅಂತ ಕಟ್ಟಡಗಳಿಗೆ ಸ್ವಂತ ನಿವೇಶನಕ್ಕೆ ಗ್ರಾಮದ ಮುಖಂಡರುಗಳ ಮನವೊಲಿಸಿ ಸ್ವಂತ ಕಟ್ಟಡಕ್ಕೆ ಜಾಗವನ್ನು ಕೊಡುಗೆಯಾಗಿ ನೀಡುವ ಮನಸ್ಸುಳ್ಳ ವ್ಯಕ್ತಿಗಳನ್ನು ಒತ್ತಾಯಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದಲ್ಲಿ ಉತ್ತಮವಾದ ಗ್ರಾಮ ಪಂಚಾಯಿತಿ ನಿರ್ಮಾಣಕ್ಕೆ ಎಲ್ಲ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಸಿ.ಆರ್. ಕೃಷ್ಣಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವು, ಉಪಾಧ್ಯಕ್ಷೆ ವಿದ್ಯಾಶ್ರೀ, ಸದಸ್ಯರಾದ ಮೋಹನ್, ಮಂಜು , ಉದ್ಯಮಿ, ಚಂದ್ರಶೇಖರ್, ಮುಖಂಡರಾದ ಸೋಮಶೇಖರ್, ಮಂಜು ಜಿಲ್ಲಾ ಪಂಚಾಯತಿ ಎಇಇ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಸಾದ್, ಡಾ. ಸೋಮಯ್ಯ, ಪಿಡಿಒ ಸಮಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು