NEWSನಮ್ಮರಾಜ್ಯ

ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿಯಲ್ಲಿ ಉಳಿಯಲು ಸುಪ್ರೀಂ ಕೋರ್ಟ್‌ ಸಮ್ಮತಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಾಜಿ ಸಚಿವ ಮತ್ತು ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಜಿಲ್ಲೆಗಳಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ಹಿಂದಿನ ಸಂದರ್ಭದಲ್ಲಿ ಬಳ್ಳಾರಿಗೆ ಭೇಟಿ ನೀಡಿದಾಗ ಅವರು ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ರೆಡ್ಡಿ ಅವರ ಉತ್ತಮ ನಡತೆ ಆಧಾರದ ಮೇಲೆ ಈ ಅನುಮತಿ ಕೊಟ್ಟಿದೆ.

ಈ ಪ್ರಕರಣದ ವಿಚಾರಣೆ ಇನ್ನೂ ಆರಂಭಗೊಂಡಿಲ್ಲ. ಅರ್ಜಿದಾರರು ಬಳ್ಳಾರಿಗೆ ಭೇಟಿ ನೀಡಿದಾಗ ಯಾವುದೇ ಜಾಮೀನು ಷರತ್ತನ್ನು ಉಲ್ಲಂಘಿಸಿಲ್ಲ. ಪ್ರಕರಣದ ಈ ಸಂಗತಿಗಳು ಮತ್ತು ಸನ್ನಿವೇಶಗಳನ್ನು ನೋಡಿದರೆ, ಜಾಮೀನು ಆದೇಶವನ್ನು ಮಾರ್ಪಡಿಸುವಂತೆ ನಿರ್ದೇಶಿಸಿದೆ ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಹೇಳಿದರು.

2015ರ ಜ. 20ರಂದು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು, ಆದರೆ ಈ ಜಿಲ್ಲೆಗಳಿಗೆ ಭೇಟಿ ನೀಡದಂತೆ ಷರತ್ತು ವಿಧಿಸಿತ್ತು. ಆದರೆ ಈಗ ಬಳ್ಳಾರಿ (ಕರ್ನಾಟಕ), ಕಡಪ ಮತ್ತು ಅನಂತಪುರ (ಆಂಧ್ರ ಪ್ರದೇಶ) ಜಿಲ್ಲೆಗಳಿಗೆ ಭೇಟಿ ನೀಡಲು ಮತ್ತು ಉಳಿದುಕೊಳ್ಳಲು ರೆಡ್ಡಿಗೆ ಅನುಮತಿ ನೀಡಲಾಗಿದೆ.

ರೆಡ್ಡಿ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಸಿಬಿಐ ತನ್ನ ತನಿಖೆಯನ್ನು ಪೂರ್ಣಗೊಳಿಸಿದ್ದರಿಂದ ತನ್ನ ಕಕ್ಷಿದಾರನ ಮೇಲೆ ಹೇರಲಾಗಿರುವ ನಿರ್ಬಂಧಗಳನ್ನು ತೆರವುಗೊಳಿಸಬೇಕು ಎಂದು ಮನವಿ ಮಾಡಿದರು ಅವರ ವಾದವನ್ನು ಪರಿಗಣಿಸಿದ ದ್ವಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿತು.

ಅರ್ಜಿದಾರರು ತಮ್ಮ ಊರಾದ ಬಳ್ಳಾರಿಯಿಂದ ಎಷ್ಟು ದಿನ ಹೊರಗಿರಬೇಕು. ಈ ಷರತ್ತನ್ನು ಮನ್ನಾ ಮಾಡಬೇಕು. ಪ್ರಕರಣದಲ್ಲಿ ಈಗಾಗಲೇ ಸುಮಾರು 10,000 ದಾಖಲೆಗಳು ಮತ್ತು 300 ಸಾಕ್ಷಿಗಳಿದ್ದರೆ. ಈ ವಿಚಾರಣೆ ಮುಂದಿನ10 ವರ್ಷಗಳು ಸಾಗಬಹುದು. ಅಲ್ಲಿಯವರೆಗೆ ಊರಿಗೆ ಭೇಟಿ ನೀಡದಿರುವಂತಹ ನಿಯಮ ಕಠಿಣವಾಗಿದೆ ಎಂದು ವಾದಿಸಿದರು.

ಮತ್ತೊಂದೆಡೆ, ಸಿಬಿಐ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್, ಆರೋಪಿ ಈಗಲೂ ಸಾಕ್ಷಿಗಳನ್ನು ಬೆದರಿಸುವ ಮತ್ತು ಲಂಚ ನೀಡುವ ಮೂಲಕ ಹೇಳಿಕೆ ಬದಲಿಸಲು ಪ್ರಯತ್ನಿಸಬಹುದು ಎಂದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು