NEWSನಮ್ಮಜಿಲ್ಲೆರಾಜಕೀಯ

ಜೆಡಿಎಸ್‌ಗೆ ಸಂಪೂರ್ಣ ಬಹುಮತ ನೀಡಿದರೆ ದೇಶವೇ ರಾಜ್ಯದತ್ತ ನೋಡುವಂತೆ ಅಭಿವೃದ್ಧಿ: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು  ಗ್ರಾಮಾಂತರ : ಜೆಡಿಎಸ್‌ಗೆ ಸಂಪೂರ್ಣ ಬಹುಮತ ನೀಡಿದರೆ 5 ವರ್ಷಗಳಲ್ಲಿ ರಾಜ್ಯದಲ್ಲಿ ಕಾಂತ್ರಿಕಾರಿ ಬೆಳವಣಿಗೆ ತಂದು ದೇಶವೇ ನಮ್ಮ ರಾಜ್ಯದತ್ತ ತಿರುಗಿ ನೋಡುವಂತೆ ಅಭಿವೃದ್ದಿ ಪರ ರಾಜ್ಯ ಮಾಡುತ್ತೇನೆ ಎಂದು ಮಾಜಿ ಮುಖ‍್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು  ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿ ಕೆಂಗಲ್ ಗ್ರಾಮದಲ್ಲಿ ಆಯೋಜಿಸಿದದ ಶ್ರೀ ಲಕ್ಷ್ಮಿವೆಂಕಟೇಶ್ವರಸ್ವಾಮಿ ಮತ್ತು ಶ್ರೀ ಕೃಷ್ಣ- ರುಕ್ಮಿಣಿಯ ಜೀರ್ಣೋದ್ಧಾರಗೊಂಡ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ನಾನು ರಾಜಕೀಯಕ್ಕೆ ಬಂದದ್ದು ಆಕಸ್ಮಿಕ. ಅಧಿಕಾರದಲ್ಲಿದ್ದಾಗ ಜನರಿಗೆ ಮೋಸ ಮಾಡಲಿಲ್ಲ. ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈತ್ರಿ ಸರ್ಕಾರ ನನಗೆ ಸಹಕಾರ ನೀಡಿತ್ತು. ಆದರೆ, ಎರಡನೇ ಬಾರಿ ಮುಖ್ಯಮಂತ್ರಿಯಾದ ಸಂದರ್ಭ ಮೈತ್ರಿ ಸರ್ಕಾರದಿಂದ ನನಗೆ ಸಹಕಾರ ದೊರೆಯಲಿಲ್ಲ. ಇಲ್ಲಸಲ್ಲದ ಕಷ್ಟಗಳನ್ನು ನೀಡಿದರು ಎಂದು ಬೇಸರ ವ್ಯಕ್ತಪಡಿಸಿದರು.

ಸಾಲ ಮನ್ನಾದಿಂದ ರೈತರ ಕಷ್ಟಗಳು ಶಾಶ್ವತವಾಗಿ ಬಗೆಹರಿಯುವುದಿಲ್ಲ. ರೈತರು ಸಾಲಗಾರರಾಗದೆ ಇರುವ ಹಾಗೆ ಸರ್ಕಾರ ಚಿಂತನೆ ಮಾಡಬೇಕಾದ ಅನಿವಾರ್ಯತೆ ಇದೆ. ಸ್ವಾತಂತ್ರ್ಯ ಬಂದು 75 ವರ್ಷ ಆದರೂ ಇನ್ನೂ ರೈತರ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ ಹಲವು ಯೋಜನೆಗಳನ್ನು ಈಗಿನ ಸರ್ಕಾರ ಸ್ಥಗಿತಗೊಳಿಸಿದ್ದು, ಜನರು ಸಂಕಷ್ಟ ಅನುಭವಿಸುವಂತೆ ಮಾಡಿದೆ ಎಂದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...