ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದರು. ಇಂದು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದ ಸಿಎಂ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಮೈದುಂಬಿ ನಿಂತ ಕೃಷ್ಣೆಯ ಜಲನಿಧಿಗೆ, ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಮುಖ್ಯಮಂತ್ರಿ ಬಾಗೀನ ಅರ್ಪಿಸಿದ ಸಿಎಂ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಈ ಭಾಗದ ಜನರ ಜೀವನವನ್ನು ಸಮೃದ್ಧಿಗೊಳಿಸಲಿ ಎಂದು ಪ್ರಾರ್ಥಿಸಿದರು.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿ ಗೆ ಆಗಮಿಸಿದರು. ಸಿಎಂ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ನದಿಯ ಬಳಿ ಸೀರೆ, ಕುಪ್ಪಸ, ಹಣ್ಣು, ಹೂವು ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನೊಳಗೊಂಡ ಬಾಗಿನವನ್ನು ಕೃಷ್ಣೆಯ ಮಡಿಲಿಗೆ ಸಮರ್ಪಿಸಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ್ ನಿರಾಣಿ, ಊಮೇಶ್ ಕತ್ತಿ, ಸಿ.ಸಿ.ಪಾಟೀಲ್, ಸಂಸದ ಗದ್ದಿಗೌಡರ್, ಜಿಲ್ಲೆಯ ಶಾಸಕರು, ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.