ಶ್ರೀರಂಗಪಟ್ಟಣ: ಚಿಕ್ಕದೇವರಾಯ ಸಾಗರ(ಸಿಡಿಎಸ್) ನಾಲೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡಿದ್ದು, ಜನರಲ್ಲಿ ಕೆಲ ಕಾಲ ಭಯದ ವಾತಾವರಣ ಸೃಷ್ಟಿಯಾಗಿತ್ತು.
ತಾಲೂಕಿನ ಅಲ್ಲಾಪಟ್ಟಣ ಗ್ರಾಮದ ವಿಶ್ವೇಶ್ವರ ಎಂಬುವರ ಜಮೀನಿನ ಬಳಿ ನಾಲೆಯೊಳಗೆ ಮೊಸಳೆಗಳು ಕಂಡು ಬಂದಿವೆ. ದಡದಲ್ಲಿ ಮಲಗಿದ್ದ ಮೊಸಳೆಯನ್ನು ಗ್ರಾಮಸ್ಥರು ನೋಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾಲೆಯಲ್ಲಿ ನೀರು ಕಡಿಮೆ ಮಾಡಿದರೆ ಮಾತ್ರ ಮೊಸಳೆಗಳನ್ನು ಸೆರೆಹಿಡಿಯಲು ಸಾಧ್ಯ. ಈ ಕುರಿತು ವಲಯ ಅರಣ್ಯ ಅಧಿಕಾರಿಗಳಿಗೆ ವಿಷಯ ತಿಳಿಸಲಾಗಿದ್ದು, ನಾಲೆಯಲ್ಲಿ ನೀರಿನ ಮಟ್ಟ ಕಡಿಮೆಯಾದ ಕೂಡಲೇ ಮೊಸಳೆಗಳನ್ನು ಹಿಡಿದು ಬೇರೆಡೆಗೆ ಬಿಡುವ ಕಾರ್ಯಾಚರಣೆ ಮಾಡುವುದಾಗಿ ಎಂದು ಅರಣ್ಯ ಇಲಾಖೆ ಸಿಬ್ಬಂದಿ ರವಿ ಹೇಳಿದರು.