NEWSಕೃಷಿ

ಬೆಳಚಲವಾಡಿ ಕೆರೆ ಏರಿ ಒಡೆದು ಅಪಾರ ಹಾನಿ : ಬೆಳೆ ನಾಶ

ವಿಜಯಪಥ ಸಮಗ್ರ ಸುದ್ದಿ

ಗುಂಡ್ಲುಪೇಟೆ: ಕೆರೆ ಕಟ್ಟೆಗೆ ನೀರು ತುಂಬಿಸುವ ಯೋಜನೆಯಡಿ ತಾಲೂಕಿನ  ಬೆಳಚಲವಾಡಿ ಕೆರೆಗೆ ನೀರು ಬಿಟ್ಟು ತುಂಬಿಸಲಾಗಿತ್ತು. ಅದರೆ ಕೆರೆಯ ಏರಿ ಶಿಥಿಲಗೊಂಡು ಒಡೆದ ಪರಿಣಾಮ  ಅಪಾರ ಪ್ರಮಾಣದ ನೀರು ಪೋಲಾಗುವ ಜತೆಗೆ ಅಪಾರ ಪ್ರಮಾಣ ಬೆಳೆಯೂ ನಾಶವಾಗಿದೆ.

ಕೆರೆಯ ಸ್ಥಿತಿಗತಿ ಬಗ್ಗೆ ನೀರಾವರಿ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್ ಗಳು ಪರಿಸೀಲಿಸದೆ ಇರುವುದು ಕೆರೆ ಏರಿ ಒಡೆದು ಈ ಅವಾಂತರ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಹಲವು ವರ್ಷಗಳಿಂದ ಕೆರೆ ಸಂಪೂರ್ಣವಾಗಿ ತುಂಬಿರಲಿಲ್ಲ. ಆದರೆ ಕೆರೆ ತುಂಬಿಸುವ ಯೋಜನೆ ಜಾರಿಯಾದ ನಂತರ ಬೆಳಚಲವಾಡಿ ಕೆರೆಗೆ ನೀರು ಬಿಡಲಾಗುತಿತ್ತು ಕೋಡಿ ಎತ್ತರಿಸಿದ ಪರಿಣಾಮ  ಒತ್ತಡ ಹೆಚ್ಚಾಗಿ ಏರಿ ಒಡೆದಿರುವ ಶಂಕೆ ವ್ಯಕ್ತವಾಗಿದೆ.

ಕೆರೆಯ ಕೋಡಿ ಒಡೆದ ಪರಿಣಾಮ ಕಮರಹಳ್ಳಿ ಕೆರೆಗೆ ನೀರು ಹರಿದರೂ ಮಾರ್ಗ ಮಧ್ಯೆ ಐವತ್ತು ಎಕೆರೆಗೂ ಹೆಚ್ಚು ಪ್ರದೇಶದಲ್ಲಿ ರೈತರು ಬೆಳೆದಿದ್ದ ಕಬ್ಬು, ಅರಿಶಿನ, ಜೋಳ ಹಾಗೂ ಜಾನುವಾರುಗಳಿಗೆ ಸಂಗ್ರಹಿಸಿದ್ದ ಹುಲ್ಲಿನ ಮೆದೆಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಇದರಿಂದ ಅಪಾರ ಪ್ರಮಾಣದ ನಷ್ಟವಾಗಿದೆ.

ಕೆರೆ ಏರಿ ಶಿಥಿಲವಾಗಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರು ಮುಂಜಾಗ್ರತೆ ವಹಿಸಲಿಲ್ಲ. ಈಗ ದುರ್ಘಟನೆ ಸಂಭವಿಸಿದೆ. ಈ ಅವಗಢಕ್ಕೆ ಅಧಿಕಾರಿಗಳೇ ಕಾರಣ. ಇನ್ನು ರೈತರು ಬೆಳೆಸ ಬೆಳೆಗಳ ನಷ್ಟಕ್ಕೆ ಪರಿಹಾರ ನೀಡಬೆಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...