CrimeNEWSದೇಶ-ವಿದೇಶ

ಹೊಸ ಇ-ಫೈಲಿಂಗ್ ಪೋರ್ಟಲ್ ದೋಷ- ಇನ್ಫೋಸಿಸ್ ಸಿಇಒಗೆ ಹಣಕಾಸು ಸಚಿವಾಲಯದಿಂದ ಸಮನ್ಸ್ ಜಾರಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಹೊಸ ಇ-ಫೈಲಿಂಗ್ ಪೋರ್ಟಲ್ ಪ್ರಾರಂಭವಾಗಿ ಎರಡೂವರೆ ತಿಂಗಳು ಕಳೆದ ನಂತರವೂ ವೆಬ್ ಸೈಟ್ ನ ಕಾರ್ಯನಿರ್ವಹಣೆಯಲ್ಲಿ ತಾಂತ್ರಿಕ ದೋಷಗಳು ಮುಂದುವರಿದಿರುವುದರಿಂದ ಸರ್ಕಾರಕ್ಕೆ ದೊಡ್ಡ ಮುಜುಗರವನ್ನುಂಟು ಮಾಡುತ್ತಿದೆ.

ವೆಬ್ ಸೈಟ್ ನಲ್ಲಿನ ತಾಂತ್ರಿಕ ದೋಷಗಳನ್ನು ಇನ್ನೂ ಏಕೆ ಸರಿಪಡಿಸಲಾಗಿಲ್ಲ ಎಂಬುದರ ಬಗ್ಗೆ ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿವರಣೆ ನೀಡುವಂತೆ ಇನ್ಫೋಸಿಸ್ ಸಿಇಒ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಪರೇಖ್ ಗೆ ಸಮನ್ಸ್ ನೀಡಲಾಗಿದೆ ಎಂದು ಹಣಕಾಸು ಸಚಿವಾಲಯ ಭಾನುವಾರು ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಆಗಸ್ಟ್ 21 ರಂದು ವೆಬ್ ಸೈಟ್ ಕಾರ್ಯನಿರ್ವಹಣೆ ಸ್ಥಗಿತದ ನಂತರ ಪರೇಖ್ ಅವರಿಗೆ ಸಮನ್ಸ್ ನೀಡಲು ನಿರ್ಧರಿಸಲಾಗಿದೆ. ಹಳೆಯ ವೆಬ್ ಸೈಟ್ ಸ್ಥಗಿತಗೊಂಡ ನಂತರ ಜೂನ್ 7, 2021 ರಂದು ಇ- ಫೈಲಿಂಗ್ ವೆಬ್ ಸೈಟ್ ಔಪಚಾರಿಕವಾಗಿ ಚಾಲನೆಗೊಂಡಿತ್ತು.

ತೆರಿಗೆದಾರರಿಗೆ ಅನುಕೂಲ, ಆಧುನಿಕ ಹಾಗೂ ತಡೆರಹಿತ ಸೇವೆಯಂತಹ ಅನುಭವವನ್ನು ಹೊಸ ಇ-‌ ಫೈಲ್ಲಿಂಗ್ ಪೋರ್ಟಲ್ ನೀಡಬೇಕಿತ್ತು. ಆದರೆ, ಆ ವೆಬ್ ಸೈಟ್ ಚಾಲನೆಗೊಂಡಾಗಿನಿಂದಲೂ ಅನೇಕ ತೊಂದರೆಗಳನ್ನು ತೆರಿಗೆದಾರರು ಎದುರಿಸುತ್ತಿದ್ದಾರೆ.

ವೆಬ್ ಸೈಟ್ ತುಂಬಾ ನಿಧಾನಗತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರೊಫೈಲ್ ಅಪ್ ಡೇಟಿಂಗ್, ಪಾಸ್ ವರ್ಡ್ಸ್ ಬದಲಾವಣೆಗೂ ತುಂಬಾ ಸಮಯ ತೆಗೆದುಕೊಳ್ಳಲಿದೆ ಎಂದು ಬಳಕೆದಾರರು ದೂರಿದ್ದರು. ಅದರಲ್ಲಿ ಟಿಡಿಎಸ್ ರಿಟರ್ನ್ಸ್ ಫೈಲ್ ಮಾಡಲು ಆಗುತ್ತಿಲ್ಲ, ‘ಪಾರ್ಗಟ್ ಪಾಸ್ ವರ್ಡ್ ‘ ಆಪ್ಸನ್ ಕೆಲಸ ಮಾಡುತ್ತಿಲ್ಲ ಎಂದು ಕೆಲವು ಬಳಕೆದಾರರು ಹೇಳಿಕೊಂಡಿದ್ದರು.

ರಿಟರ್ನ್ಸ್ ಫೈಲಿಂಗ್ ಗೆ ಕೊನೆಯ ದಿನವನ್ನು ಸೆಪ್ಟೆಂಬರ್ 30 ನೇ ತಾರೀಖಿನವರೆಗೂ ಸರ್ಕಾರ ವಿಸ್ತರಿಸಿದ್ದರೂ ವೆಬ್ ಸೈಟ್ ಇತ್ತೀಚಿಗೆ ವಿಳಂಬ ಶುಲ್ಕವನ್ನು ಪ್ರಾರಂಭಿಸಿತ್ತು. ಪೋರ್ಟಲ್ ನಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಹಣಕಾಸು ಸಚಿವರು ಜೂನ್ ತಿಂಗಳಲ್ಲಿ ಇನ್ಫೋಸಿಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಈ ವಿಚಾರದ ಬಗ್ಗೆ ಗಮನ ಹರಿಸಲು ಏಳು ಸದಸ್ಯರನ್ನೊಳಗೊಂಡ ಕಾರ್ಯಪಡೆ ರಚನೆಗೆ ಐಸಿಎಐಗೆ ಹಣಕಾಸು ಸಚಿವಾಲಯ ಹೇಳಿತ್ತು.

ಇನ್ನು ಇನ್ಫೋಸಿಸ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಹೊಸ- ಇ- ಫೈಲಿಂಗ್ ಪೋರ್ಟಲ್ ತಾಂತ್ರಿಕ ದೋಷ ಪರಿಹಾರದ ಬಗ್ಗೆ ಮಾಹಿತಿ ಪಡೆಯುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.

ಅಲ್ಲದೆ, ಹೊಸ ವೆಬ್ ಸೈಟ್ ನಲ್ಲಿನ ತಾಂತ್ರಿಕ ತೊಂದರೆ ಸರಿಯಾಗುವವರೆಗೂ ಹಳೆಯ ವೆಬ್ ಸೈಟ್ ಲಭ್ಯವಾಗುವಂತೆ ಮಾಡಬೇಕೆಂದು ಸಲಹೆ ನೀಡಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದರು.
ಆದಾಗ್ಯೂ, ಅಪ್ ಡೇಟ್ ಐಟಿ ರಿಟರ್ನ್ಸ್ ಫಾರಂನಲ್ಲಿರುವ ಅನೇಕ ಹೊಸ ಅಂಶಗಳು ಹಳೆಯ ವೆಬ್ ಸೈಟ್ ನಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ