NEWSದೇಶ-ವಿದೇಶ

ಕರ್ನಾಟಕ-ತಮಿಳುನಾಡು ರಾಜ್ಯಗಳ ನಡುವೆ ನಾಳೆಯಿಂದ ಸಾರಿಗೆ ಸೇವೆ ಮತ್ತೆ ಆರಂಭ

ನಾಳೆಯಿಂದ ಶಾಲಾ ಕಾಲೇಜುಗಳ ಆರಂಭ l ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಕಾರಣದಿಂದ ಕರ್ನಾಟಕ-ತಮಿಳುನಾಡು ರಾಜ್ಯಗಳ ನಡುವೆ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಿದ್ದ ಕೆಎಸ್​ಆರ್​ಟಿಸಿ ನಾಳೆಯಿಂದ (ಆಗಸ್ಟ್‌ 23) ಮತ್ತೆ ಸಂಸ್ಥೆಯ ಬಸ್​ಗಳನ್ನು ಆರಂಭಿಸುತ್ತಿದೆ.

ಸುಮಾರು ನಾಲ್ಕು ತಿಂಗಳ ನಂತರ ತಮಿಳುನಾಡು – ಕರ್ನಾಟಕ ನಡುವೆ ಮೊದಲ ಹಂತದಲ್ಲಿ 250 ಬಸ್​ಗಳು ಸಂಚರಿಸಲಿವೆ. ಈ ಬಗ್ಗೆ ಕೆಎಸ್​ಆರ್​ಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನಾಳೆಯಿಂದ ಬಸ್​ ಸಂಚಾರ ಆರಂಭಿಸುತ್ತಿರುವುದಾಹಿ ತಿಳಿಸಿದೆ.

ಮೊದಲ ಹಂತದಲ್ಲಿ ಸಂಚರಿಸಲಿರುವ 250 ಬಸ್​ಗಳು ಹೊಸೂರು, ವೆಲ್ಲೂರು, ತಿರುವಣ್ಣಾಮಲೈ, ವಿಲ್ಲುಪುರಂ ತಿರುಕೊಯಿಲೂರು, ಕೊಯಂಬತ್ತೂರು, ತಿರುನಲ್ಲಾರ್, ತಿರುಚಿ, ಮಧುರೈ, ಕುಂಬಕೊಣಂ, ಕಾಂಚಿಪುರಂ, ಚೆನೈ ಹಾಗೂ ಊಟಿಗೆ ಸಂಪರ್ಕ ಕಲ್ಪಿಸಲಿವೆ. ಆರೋಗ್ಯದ ಹಿತದೃಷ್ಟಿಯಿಂದ ಪ್ರಯಾಣಿಕರು ಕೊರೊನಾ ನಿಯಮಾವಳಿಗಳನ್ನು ಪಾಲಿಸಿ ಬಸ್​ನಲ್ಲಿ ಸಂಚರಿಸಬೇಕಿದೆ.

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ: ಆಗಸ್ಟ್ 23ರ ಸೋಮವಾರದಿಂದ 9 ರಿಂದ 12 ನೇ ತರಗತಿಯ ಶಾಲಾ- ಕಾಲೇಜು ಆರಂಭವಾಗಲಿರುವುದರಿಂದ ಬಿಎಂಟಿಸಿ ಬಸ್​ಗಳಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಶಾಲಾ- ಕಾಲೇಜಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

2020-21 ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಮತ್ತು ಈ ವರ್ಷದ ಶೈಕ್ಷಣಿಕ ದಾಖಲಾತಿ ಶುಲ್ಕ ಕಟ್ಟಿರುವ ರಶೀದಿ ತೋರಿಸಿ ವಿದ್ಯಾರ್ಥಿಗಳು ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಅಲ್ಲದೇ ಶಾಲಾ ಕಾಲೇಜಿನ ಐಡಿ ಕಾರ್ಡ್ ತೋರಿಸಿಯೂ ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ. ಬಿಎಂಟಿಸಿಯ ಮುಂದಿನ ಆದೇಶದವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...