ಬೆಂಗಳೂರು: ನಾಳೆಯಿಂದ ಶಾಲೆಗಳಲ್ಲಿ ಭೌತಿಕ ತರಗತಿಗಳು ಪ್ರಾರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇನ್ನು ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದು ಸಲಹೆ ನೀಡಿದ್ದಾರೆ.
ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ, ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಕೊರೊನಾ ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕವಿಲ್ಲದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಕೋರಿದ್ದಾರೆ.