CrimeNEWSನಮ್ಮರಾಜ್ಯ

ಸಾರಿಗೆ ನೌಕರರಿಗೆ ಕ್ವಾರ್ಟರ್ಸ್‌ ಖಾಲಿ ಮಾಡುವ ನೋಟಿಸ್‌ ಸಂಬಂಧ ಬಿಎಂಟಿಸಿ ಎಂಡಿ ಇತರರಿಗೆ ಸಿಟಿ ಕೋರ್ಟ್‌ನಿಂದ ತುರ್ತು ನೋಟಿಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮುಷ್ಕರದ ವೇಳೆ ವಜಾ ಮಾಡಿರುವ ನೌಕರರಿಗೆ ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಅಂತಿಮ ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯ ನೋಟಿಸ್‌ ಸಂಬಂಧ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ಸೇರಿ ಇತರರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ಸೆಪ್ಟೆಂಬರ್‌ 20ಕ್ಕೆ ವಿಚಾರಣೆ ಮುಂದೂಡಿದೆ.

ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಅಂತಿಮ ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ಕೋರಿ ಕಳೆದ ಶನಿವಾರ ಬಿಎಂಟಿಸಿ ನೌಕರ ಜಯಪ್ರಕಾಶ್‌ ಸಿಟಿ ಸಿವಿಲ್‌ ನ್ಯಾಯಾಲಯದ ಮೊರೆ ಹೋಗಿದ್ದರು. 56ನೇ ಕೋರ್ಟ್‌ ಹಾಲ್‌ನ ನ್ಯಾಯಾಧೀಶರಾದ ಕೃಷ್ಣಮೂರ್ತಿ ಆರ್‌. ಪಡಸಲಗಿ ಅವರಿದ್ದ ನ್ಯಾಯಪೀಠ ಅರ್ಜಿ ಪುರಸ್ಕರಿಸಿತ್ತು.

ಇನ್ನು ನೌಕರ ಜಯಪ್ರಕಾಶ್‌ ಅವರ ಪರ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲರಾದ ಎಚ್‌.ಬಿ.ಶಿವರಾಜು ಅವರು ನೋಟಿಸ್‌ ನೀಡಿರುವುದಕ್ಕೆ ತಡೆಯಾಜ್ಞೆ ನೀಡುವಂತೆ ನ್ಯಾಯಾಧೀಶರ ಮುಂದೆ ಶನಿವಾರ ವಾದ ಮಂಡಿಸಿದ್ದರು. ಅವರ ವಾದವನ್ನು ಆಲಿಸಿದ ನ್ಯಾಯಪೀಠ ತೀರ್ಪನ್ನು ಆಗಸ್ಟ್‌ 23ಕ್ಕೆ (ಇಂದಿಗೆ) ಕಾಯ್ದಿರಿಸಿತು.

ಸೋಮವಾರ (ಇಂದು) ಮತ್ತೆ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಪೀಠ ನೌಕರರಿಗೆ ಅಂತಿಮ ನೋಟಿಸ್‌ ನೀಡಿರುವ ಸಂಬಂಧ ಬಿಎಂಟಿಸಿ ಎಂಡಿ ಸೇರಿ ಇತರರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ಸೆಪ್ಟೆಂಬರ್‌ 20ಕ್ಕೆ ವಿಚಾರಣೆ ಮುಂದೂಡಿತು.

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಏಪ್ರಿಲ್‌ 7 ರಿಂದ 15 ದಿನಗಳ ಕಾಲ ಸಾರಿಗೆ ನೌಕರರು ನಡೆಸಿದ್ದ ಮುಷ್ಕರದ ವೇಳೆ 3 ಸಾವಿರಕ್ಕೂ ಹೆಚ್ಚು ನೌಕರರನ್ನು ವಜಾ ಮಾಡಲಾಗಿದೆ. ಈ ನಡುವೆ ಕ್ವಾರ್ಟರ್ಸ್‌ ಖಾಲಿ ಮಾಡಬೇಕು ಎಂದು ಬಿಎಂಟಿಸಿ ಅಧಿಕಾರಿಗಳು ಅಂತಿಮ ನೋಟಿಸ್‌ ನೀಡಿದ್ದಾರೆ.

ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು (ಎಂಡಿ) ಮತ್ತು ಇತರರ ವಿರುದ್ಧ ನೌಕರ ಜಯಪ್ರಕಾಶ್‌ ಎಂಬುವರು  ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಏನೂತಪ್ಪು ಮಾಡದ ನಮ್ಮನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿದ್ದು ಅಲ್ಲದೇ ಈಗ ಕ್ವಾರ್ಟರ್ಸ್‌ ಖಾಲಿ ಮಾಡುವಂತೆ ಒತ್ತಡ ಹೇರುತ್ತಿರುವ ಅಧಿಕಾರಿಗಳ ವಿರುದ್ಧ ನೌಕರರು ಕಿಡಿಕಾರುತ್ತಿದ್ದಾರೆ. ಏತನ್ಮಧ್ಯೆ ಜಯ ಪ್ರಕಾಶ್‌ ಅವರು ಅಧಿಕಾರಿಗಳು ವಸತಿ ಗೃಹ ಖಾಲಿ ಮಾಡಬೇಕು ಎಂದು ನೀಡಿರುವ ನೋಟಿಸ್‌ ಸಂಬಂಧ ಸಮರ ಸಾರಿದ್ದಾರೆ.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ