NEWSನಮ್ಮರಾಜ್ಯರಾಜಕೀಯ

ಜನ ಬಿಜೆಪಿ ವಿರುದ್ಧ ಆಕ್ರೋಶದ ಯಾತ್ರೆ ನಡೆಸುತ್ತಾರೆ: ಸಲೀಂ ಅಹ್ಮದ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಅನುಮತಿ ನಿರಾಕರಿಸಿ ಮುಖ್ಯ ಕಾರ್ಯದರ್ಶಿ ಪತ್ರ ಬರೆಯುತ್ತಾರೆ. ಆದರೆ, ಸಾವಿರಾರು ಜನರನ್ನು ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಲು ಅನುಮತಿ ನೀಡುತ್ತಾರೆ. ಇಂಥ ಸರ್ಕಾರ ನಮ್ಮಲ್ಲಿ ಇರುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ಮಾತನಾಡಿ, ಕೋವಿಡ್ ಮೂರನೇ ಅಲೆ ಬಂದರೆ, ಅದರಿಂದ ಅನಾಹುತ. ಆದರೆ ಅದಕ್ಕೆಲ್ಲ ಈ ನಾಲ್ಕು ಜನ ಕೇಂದ್ರ ಸಚಿವರೇ ಹೊಣೆ ಹೊರಬೇಕು ಎಂದ ಅವರು, ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿವೆ. ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ತಾರತಮ್ಯ ಧೋರಣೆ, ರಾಜ್ಯಕ್ಕೆ ಬರಬೇಕಾದ ಅನುದಾನ ತರಲು ವಿಫಲರಾಗಿರುವುದೇ ನಿದರ್ಶನ ಎಂದು ಹೇಳಿದರು.

ಇನ್ನು 2019ರಿಂದ ಆಗುತ್ತಿರುವ ನೆರೆಗೆ ಪರಿಹಾರ ನೀಡದಿರುವುದಕ್ಕೆ, ಜಿಎಸ್‍ಟಿ ಪಾಲು 13 ಸಾವಿರ ಕೋಟಿ ರೂ. ನೀಡದಿರುವುದಕ್ಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಬಿಜೆಪಿ ನಾಯಕರು ರಾಜ್ಯದ ಜನರ ಮುಂದೆ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಜನ ಬಿಜೆಪಿ ವಿರುದ್ಧ ಆಕ್ರೋಶದ ಯಾತ್ರೆ ನಡೆಸುತ್ತಾರೆ’ ಎಂದು ಎಚ್ಚರಿಸಿದರು.

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದು, ರಾಜ್ಯದ 25 ಸಂಸದರು ಆಯ್ಕೆಯಾಗಿದ್ದು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ. ಇಲ್ಲಿ ಹುಲಿಗಳಂತೆ ಮಾತನಾಡುವ ಸಂಸದರು ಮೋದಿ ಮುಂದೆ ಇಲಿಗಳಾಗುತ್ತಾರೆ. ರಾಜ್ಯಕ್ಕೆ ಬರಬೇಕಾದ ಪಾಲು ತರಲು ಹೋರಾಟ ಮಾಡುತ್ತಿಲ್ಲ. ಹೀಗಿರುವಾಗ ಜನ ಇವರಿಗೆ ಯಾಕೆ ಆಶೀರ್ವಾದ ಮಾಡುತ್ತಾರಾ? ಎಂದು ಪ್ರಶ್ನಿಸಿದರು.

2ನೇ ಅಲೆ ಎಚ್ಚರಿಕೆ ನೀಡಿದ ನಂತರವೂ ಬಿಜೆಪಿ ಸರ್ಕಾರ ಉಪಚುನಾವಣೆ, ನಾಯಕತ್ವ ಬದಲಾವಣೆ ವಿಚಾರವಾಗಿ ಮೈಮರೆಯಿತು. ಪರಿಣಾಮ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ಉತ್ತರಿಸಬೇಕು. ಮೂರನೇ ಅಲೆ ತಡೆಯಲು ಯಾವ ಕ್ರಮ ಕೈಗೊಂಡಿದ್ದಾರೆ ಯಾರಿಗೂ ಗೊತ್ತಿಲ್ಲ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಗೃಹ ಸಚಿವರ ಹೆಗಲ ಮೇಲಿದೆ. ಬಿಜೆಪಿ ಮಾಜಿ ಸಚಿವರು ನಾಡ ಬಂದೂಕಿನಿಂದ ಗುಂಡು ಹಾರಿಸಲು ಅವಕಾಶ ಕೊಟ್ಟಿದ್ದು ಯಾರು? ಅದು ಎಲ್ಲಿಂದ ಬಂತು? ಇದನ್ನು ಗೃಹ ಸಚಿವರು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ.

ಇಲ್ಲಿಯೂ ಬಿಹಾರ ಹಾಗೂ ಉತ್ತರ ಪ್ರದೇಶದ ಸಂಸ್ಕೃತಿಯನ್ನು ತರಲು ಮುಂದಾಗಬಾರದು. ನಮ್ಮದು ಶಾಂತಿ ಪ್ರಿಯ ರಾಜ್ಯ. ಇದನ್ನು ನೋಡಿ ಬೇರೆಯವರು ಕಲಿಯ ಬಾರದು. ಮೊದಲ ಬಾರಿಗೆ ಗೃಹಮಂತ್ರಿಗಳಾಗಿರುವ ಅರಗ ಜ್ಞಾನೇಂದ್ರ ಅವರು ಕಾನೂನು ಪುಸ್ತಕ ಓದಬೇಕು ಎಂದು ಕುಟುಕಿದರು.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ