NEWSನಮ್ಮಜಿಲ್ಲೆರಾಜಕೀಯ

ಮೈಸೂರು: 23ನೇ ಮಹಾಪೌರರಾದ ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಳೆದ 37 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗೆ ನಗರಪಾಲಿಕೆಯ ಮೇಯರ್‌ ಪಟ್ಟ ಒಲಿದಿದೆ.

ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರಾ ಅವರು ನೂತನ ಮೇಯರ್‌ ಆಗಿ ಆಯ್ಕೆಯಾದರು. ಪ್ರಭಾರಿ ಮೇಯರ್‌ ಆಗಿದ್ದ ಆನ್ವರ್‌ಬ್ಹೇಗ್‌ ಉಪಮೇಯರ್‌ ಆಗಿ ಮುಂದುವರಿಯಲಿದ್ದಾರೆ.

ಇದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸವಿವ ಎಸ್‌.ಟಿ.ಸೋಮಶೇಖರ್‌ ಅವರು, ಮೈಸೂರಿನ ಮೇಯರ್ ಆಗಿ ಆಯ್ಕೆಗೊಂಡ ಸುನಂದಾ ಪಾಲನೇತ್ರ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.

ಇನ್ನು ಈ ಗೆಲುವಿಗೆ ಕಾರಣರಾದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇವೆ ಎಂದು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

23ನೇ ಮಹಾಪೌರರಾಗಿ 59ನೇ ವಾರ್ಡಿನ ಸದಸ್ಯರಾದ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗುವ ಮೂಲಕ ನಗರಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ಕಮಲವನ್ನು ಅರಳಿಸಿದ್ದು, ಈ ಮೂಲಕ ಕಳೆದ ಫೆಬ್ರವರಿಯಲ್ಲಿ ನಡೆದಿದ್ದ ಚುನಾವಣೆಯಲ್ಲಿ ಪರಾಜಿತರಾಗಿ ಕಣ್ಣೀರು ಹಾಕಿ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದ ಸುನಂದಾ ಪಾಲನೇತ್ರ ಅವರನ್ನು ಅಂದು ಸಿಎಂ ಆಗಿದ್ದ ಬಿಎಸ್‌ವೈ ಅವರು ಸಮಾಧಾನ ಪಡಿಸಿದ್ದರು.

ಅವರು ಅಂದು ಸಮಾಧಾನಪಡಿಸಿ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಿದ್ದರು. ಅಂದು ಅವರ ಕೊಟ್ಟ ಸಲಹೆಯಿಂದ ತಾಳ್ಮೆಕಾಯ್ದುಕೊಂಡ ಸುನಂದಾ ಅವರು ಇಂದು ಕೊನೆಗೂ 4ನೇ ಪ್ರಯತ್ನದಲ್ಲಿ ಯಶಸ್ವಿಯಾಗಿ ಬಹುವರ್ಷಗಳ ಕನಸನ್ನು ನನಸು ಮಾಡಿಕೊಂಡಿಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ