NEWSನಮ್ಮರಾಜ್ಯ

ಸ್ವಯಂ ಉದ್ಯೋಗದಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಉದ್ಯಮ ಆರಂಭಿಸಲು ಬೇಕಾಗುವ ಎಲ್ಲಾ ರೀತಿಯ ಮಾಹಿತಿ ತಿಳಿದುಕೊಂಡು ಸ್ವಯಂ ಉದ್ಯಮ ಪ್ರಾರಂಭಿಸಿ, ಆರ್ಥಿಕ ಅಭಿವೃದ್ಧಿ ಸಾಧಿಸಬೇಕೆಂದು ಕಲಬುರಗಿ ಜಿಲ್ಲಾ ಪಂಚಾಯಿತಿ (ಗ್ರಾಮೀಣ ಕೈಗಾರಿಕೆಗಳು) ಉಪನಿರ್ದೇಶಕ ಅಬ್ದುಲ್ ಅಜೀಮ್ ಅವರು ಉದ್ಯಮಿಗಳಿಗೆ ಕರೆ ನೀಡಿದರು.

ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಕೌಶಲ್ಯಾಭಿವೃದ್ಧಿ, ಉದ್ಯಮಶೀತೆ, ಜೀವನೋಪಾಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಕಲಬುರಗಿ ಸಂಯುಕ್ತಾಶ್ರಯದಲ್ಲಿ ಕಲಬುರಗಿಯ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಕಚೇರಿಯಲ್ಲಿ ಹತ್ತು ದಿನಗಳ ಕಾಲ ಏರ್ಪಡಿಸಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾವಂತರು ಸ್ವಯಂ ಉದ್ಯೋಗ ಪ್ರಾರಂಭಿಸಲು ಮುಂದೆ ಬರಬೇಕು. ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮ ಪ್ರಾರಂಭಿಸಲು ಅನೇಕ ಅವಕಾಶಗಳು ಲಭ್ಯವಿವೆ. ನಮ್ಮ ದೇಶದಲ್ಲಿ ಯುವಜನರು ಹೆಚ್ಚಿನ ಸಂಖೆಯಲ್ಲಿದ್ದು, ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಾಶವಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ರಾಯಚೂರಿನ (ಸಿಡಾಕ್) ವಿಭಾಗದ ಜಂಟಿ ನಿರ್ದೇಶಕ ಜಿಯು ಹುಡೇದ ಮಾತನಾಡಿ, 10 ದಿನಗಳ ತರಬೇತಿ ಅವಧಿಯಲ್ಲಿ ಸಾಧನಾ ಪ್ರೇರಣಾ ತರಬೇತಿ, ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ.

ಉದ್ದಿಮೆಯನ್ನು ಆಯ್ಕೆ ಮಾಡುವ ವಿಧಾನ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಸಮೀಕ್ಷೆ ಮಾಡುವ ವಿಧಾನ, ಬ್ಯಾಂಕ್ ವ್ಯವಹಾರಗಳು, ಉದ್ಯಮ ಸ್ಥಾಪನೆಗೆ ಇರುವ ಸಾಲ-ಸೌಲಭ್ಯಗಳು ಮತ್ತು ಇತರೆ ಸಂಬಂಧಪಟ್ಟ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಕಲಬುರಗಿ ಜಿಲ್ಲೆಯ ಉದ್ಯಮಶೀಲರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸಿಡಾಕ್ ಫ್ಯಾಕಲ್ಟಿ ಹಾಗೂ ಕನ್ಸ್‍ಲ್ಟಂಟ್ ಸೈಯದ್ ಆಷ್ಫಾಕ್ ಸ್ವಾಗತಿಸಿದರು. ಕಲಬುರಗಿ ಸಿಡಾಕ್ ತರಬೇತಿದಾರರಾದ ಮಾಧುರಿ ಪ್ರಾರ್ಥಿಸಿದರು. ಸಿಡಾಕ್ ತರಬೇತುದಾರರಾದ ಜಯಶ್ರೀ ಎಸ್. ಪಾಟೀಲ ಕಾರ್ಯಕ್ರಮ ನಿರೂಪಣೆ ಮಾಡಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು