NEWSದೇಶ-ವಿದೇಶರಾಜಕೀಯ

ಸಚಿವಾಕಾಂಕ್ಷಿಗಳ ಆಸೆಗೆ ತಣ್ಣೀರೆರೆಚಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮೂಲಕ ಸಚಿವ ಸಂಪುಟ ವಿಸ್ತರಣೆ ಮೂಲಕ ತಮಗೆ ಮತ್ತೆ ಸಂಪುಟದಲ್ಲಿ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯಿಟ್ಟುಕೊಂಡಿದ್ದ ಸಚಿವಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ನಿರಾಸೆಯನ್ನುಂಟು ಮಾಡಿದ್ದಾರೆ.

ಬುಧವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮುಂದಿನ ವಾರ ಬರಲು ಹೇಳಿದ್ದಾರೆ ಹೀಗಾಗಿ ರಾಜ್ಯ ರಾಜಕೀಯದ ಬಗ್ಗೆ ಏನನ್ನು ಮಾತನಾಡಲು ಸಾಧ್ಯವಾಗಿಲ್ಲ ಎಂದರು.

ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಈಗಲೆ ಹೇಳಲು ಸಾಧ್ಯವಿಲ್ಲ. ಮುಂದಿನ ವಾರ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳುವ ಮೂಲಕ ಮಂತ್ರಿಮಂಡಲದಲ್ಲಿ ಅವಕಾಶಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದವರ ಆಸೆಗೆ ತಣ್ಣೀರು ಎರಚಿದ್ದಾರೆ.

ತದನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮುಖ್ಯಮಂತ್ರಿ, ರಾಜ್ಯದ ವಿದ್ಯಮಾನಗಳ ಕುರಿತು ಚರ್ಚಿಸಿದರು. ಇನ್ನು ಇಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Leave a Reply

error: Content is protected !!
LATEST
KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ