CrimeNEWSನಮ್ಮಜಿಲ್ಲೆ

ಆಗಿರುವುದು ರೇಪ್ ಕೇಸ್ ದಾಖಲಿಸಿರುವುದು ಕಿರುಕುಳ ಪ್ರಕರಣ: ಉಗ್ರಪ್ಪ  ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅತ್ಯಾಚಾರ ನಡೆದ್ರೂ ಐಪಿಸಿ ಸೆಕ್ಷನ್ 376ರ ಅಡಿ ಯಾಕೆ ಕೇಸ್ ಹಾಕಲಿಲ್ಲ? ಗ್ಯಾಂಗ್ ರೇಪ್ ಮಾಡಿರುವುದು ಸ್ಪಷ್ಟವಾಗಿದೆ. ರೇಪ್ ಬಿಟ್ಟು ಕಿರುಕುಳ ಕೇಸ್ ದಾಖಲಿಸಿದ್ದಾರೆ. ರಾಜ್ಯದ ಗೃಹಮಂತ್ರಿಗಳು, ಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಪ್ರಶ್ನಿಸಿ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ನಡೆಸಿದ ಉದ್ದಿಗೋಷ್ಠಿಯಲ್ಲಿ ಮಾತನಾಡಿದ ವಿ.ಎಸ್ ಉಗ್ರಪ್ಪ, ತಿಂಗಳಲ್ಲಿ ಮೈಸೂರಿನಲ್ಲಿ ಒಂದು ಶೂಟೌಟ್ ಆಗಿದೆ. ಮೂರು ಮರ್ಡರ್ ಗಳಾಗಿವೆ, ಮೂರು ದರೋಡೆ, 16 ಕಳ್ಳತನಗಳಾಗಿವೆ.

ಸರಸ್ವತಿಪುರಂನಲ್ಲಿ ಇವತ್ತು ಬಾಲಕಿ ಅತ್ಯಾಚಾರ ಕೇಸ್ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅತ್ಯಾಚಾರ ನಡೆದ್ರೂ 376ರ ಅಡಿ ಕೇಸ್ ಯಾಕೆ ಹಾಕಲಿಲ್ಲ ಎಂದು ಪ್ರಶ್ನಿಸಿದರು.

ಹಿಂದೆ ವಿಬ್ ಗಯಾರ್ ಶಾಲೆಯಲ್ಲಿ ಪ್ರಕರಣ ಆಗಿತ್ತು. ಆಗ ನೀವು ಏನಂತ ಬಾಯಿ ಬಡಿದುಕೊಳ್ತಿದ್ರಿ. ಈಗ ಮೈಸೂರಿನ ಹೊಣೆ ಯಾರು ಹೊರಬೇಕು ಎಂದು ಪ್ರಶ್ನಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ನಡೆದಿರುವ ಕೃತ್ಯ ಅಮಾನವೀಯವಾದುದು. ದೆಹಲಿಯ ನಿರ್ಭಯಾ ಕೇಸ್ ರೀತಿಯಲ್ಲಿ, ತೆಲಂಗಾಣದ ರೆಡ್ಡಿ ಕೇಸ್ ರೀತಿಯಲ್ಲಿ ಹೀನ ಕೃತ್ಯವಿದು.

ಇನ್ನು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ರಿಂಗ್ ರಸ್ತೆಯಲ್ಲಿ ಲಲಿತಾದ್ರಿ ಪಾರ್ಕ್ ಇದೆ. ಆ ಪಾರ್ಕ್‍ನಲ್ಲಿ ಯುವತಿ ಮತ್ತು ಅಕೆಯ ಸ್ನೇಹಿತ ಮಾತನಾಡುತ್ತಿರುತ್ತಾರೆ. ಅಲ್ಲಿಂದ ಯುವತಿ ಎಳೆದೋಯ್ದು ಕೃತ್ಯವೆಸಗಿದ್ದಾರೆ.

ಸಂಜೆ 7:30 ರಿಂದ 10:30 ರವರೆಗೆ ನಡೆದಿದೆ. ನಂತರ ಆ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಣ್ಣುಮಗಳ ದೇಹದ ಮೇಲೆ ಗಂಭೀರ ಗುರುತುಗಳಿವೆ, ಗಾಯಗಳಾಗಿವೆ. ಪೈಶಾಚಿಕವಾಗಿ ಕೃತ್ಯವೆಸಗಿದ್ದಾರೆ.

ಘಟನೆ ನಡೆದು 24 ಗಂಟೆಯಾದರೂ ಕೇಸ್ ದಾಖಲಾಗಿರಲಿಲ್ಲ ನಂತರ ಆಲನಹಳ್ಳಿ ಠಾಣೆಯಲ್ಲಿ ದೂರು ದಾಖಲಾಗುತ್ತದೆ. ಮೋದಿ ನಿರ್ಭಯ ಕೇಸ್ ವೇಳೆ ಏನು ಮಾಡಿದ್ರಿ? ನಂದಿತಾ ಸಾವು ಗೃಹ ಸಚಿವರ ಕ್ಷೇತ್ರದಲ್ಲಿ ನಡೆದಿತ್ತು ಆಗ ನೀವು ಏನು ಮಾಡಿದ್ದಿರಿ ಇದರ ಬಗ್ಗೆ ನೀವು ಉತ್ತರಿಸಿ ಎಂದು ಕಿಡಿಕಾರಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು