CrimeNEWSನಮ್ಮರಾಜ್ಯ

ಕೆಎಸ್ಆರ್​ಟಿಸಿ ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ ಟಿಪ್ಪರ್ ಚಾಲಕ ಮೃತ, ಮೂವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಹೊಸಪೇಟೆ: ಕೆಎಸ್ಆರ್​ಟಿಸಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಇಂಗಳಗಿ ಕ್ರಾಸ್ ಬಳಿ ಜರುಗಿದೆ.

ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ಶ್ರೀ ಶೈಲಕ್ಕೆ ಹೋಗುತಿದ್ದ ಬಸ್ ಮಾರ್ಗಮಧ್ಯದಲ್ಲಿ ಅಪಘಾತಗೀಡಾಗಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕ ಶಶಿಕುಮಾರ್(22) ಮೃತಪಟ್ಟಿದ್ದಾರೆ.

ಬಸ್‌ನಲ್ಲಿ ಇದ್ದ 15 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅಪಘಾತಕ್ಕೆ ಟಿಪ್ಪರ್ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದು ಬಂದಿದೆ.

ಅವಗಢದಿಂದ ಗಾಯಗೊಂಡ ಪ್ರಯಾಣಿಕರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಚಾಲಕ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಸಪೇಟೆ ಸಂಚಾರಿ ಮತ್ತು ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂದು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು