NEWSನಮ್ಮರಾಜ್ಯ

ಮೀಸಲಾತಿ ಕಲ್ಪಿಸಿದರೆ ಸಿಹಿ ಹಂಚಿ ಸಂಭ್ರಮ, ತಪ್ಪಿದ್ದಲ್ಲಿ ಧರಣಿ ಆರಂಭ: ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಸರ್ಕಾರ ನಮ್ಮ ಹೋರಾಟಕ್ಕೆ ಮಣಿದ ಕಾರಣ ಧರಣಿಯನ್ನು ಹಿಂಪಡೆದಿದ್ದೇವೆ, ಕಾಲಮಿತಿಯೊಳಗೆ 2 ಎ ಮೀಸಲಾತಿ ಕಲ್ಪಿಸದಿದ್ದರೆ ಅಕ್ಟೋಬರ್ 1 ರಿಂದ ಧರಣಿ ಮತ್ತೆ ಆರಂಭಿಸುತ್ತೇವೆ ಎಂದು ಪಂಚಮಸಾಲಿ ಹೋರಾಟ ಸಮಿತಿ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಸಪ್ಪನವರ್ ಸರ್ಕಾರಕ್ಕೆ ಗಡುವು ನೀಡಿದರು.

ತಾಲೂಕಿನ ಹಿಟ್ನಳ್ಳಿ ಗ್ರಾಮದಲ್ಲಿ ಶನಿವಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಪಡೆಯುವುದಕ್ಕಾಗಿ ಏರ್ಪಡಿಸಿದ್ದ ಪ್ರತಿಜ್ಞಾ ಪಂಚಾಯಿತಿ ಬೃಹತ್ ರಾಜ್ಯ ಮಟ್ಟದ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರ್ಥಿಕವಾಗಿ ಹಿಂದುಳಿದಿರುವ ಗೌಡ ಲಿಂಗಾಯತ, ಮಲೇಗೌಡ ಹಾಗೂ ದೀಕ್ಷಾ ಲಿಂಗಾಯತ ಒಳಗೊಂಡು ಪಂಚಮಸಾಲಿ ಸಮಾಜವು ಕೃಷಿ ಮತ್ತು ಕುಶಲ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ಈ ಸಮಾಜಕ್ಕೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿಯ ಅವಶ್ಯಕತೆ ಇದೆ ಎಂದರು.

2ಎ ಮೀಸಲಾತಿಗಾಗಿ ಒತ್ತಾಯಿಸಿ ಸ್ವಾಮೀಜಿಗಳ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಬಸವಕಲ್ಯಾಣದಿಂದ ಬೆಂಗಳೂರಿನ ವರೆಗೆ 712 ಕಿ.ಮೀ. ಪಾದಯಾತ್ರೆ, ಪ್ರೀಡಂ ಪಾರ್ಕಿನಲ್ಲಿ 29 ದಿನಗಳ ಕಾಲ ಧರಣಿ ಸತ್ಯಾಗ್ರಹದ ಹೋರಾಟಕ್ಕೆ ಸರ್ಕಾರವೇ ಮಣಿದು ಮೀಸಲಾತಿ ಕಲ್ಪಿಸಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಕಾಲಾವಕಾಶ ಕೇಳಿದ್ದು, ಅವರು ಕೇಳಿದ್ದ ಕಾಲಾವಕಾಶ ಸೆ.30 ರಂದು ಮುಗಿಯಲಿದೆ. ಮೀಸಲಾತಿ ಕಲ್ಪಿಸಿದರೆ ಸಿಹಿ ಹಂಚಿ ಸಂಭ್ರಮಿಸುತ್ತೇವೆ ತಪ್ಪಿದ್ದಲ್ಲಿ ಅಂದಿನಿಂದಲೇ ಧರಣಿ ಆರಂಭಿಸುವುದಾಗಿ ತಿಳಿಸಿದರು.

ಲಿಂಗಾಯಿತ ಪಂಚಮಸಾಲಿ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಲಿಂಗಾಯಿತರು ಒಳಪಂಗಡಗಳ ಬಗ್ಗೆ ಧ್ವನಿ ಎತ್ತದ ಕಾರಣ ಈ ಸಮಾಜವನ್ನು ಮುಂದುವರಿದ ಸಮುದಾಯ ಎಂದು ಬಿಂಬಿಸಲಾಗುತ್ತಿದೆ ಆದರೆ ಪಂಚಮಸಾಲಿ ಸಮಾಜದಲ್ಲಿ 3 ಕೋಟಿ ಜನರಿದ್ದು, ಶೇ. 80 ಕ್ಕೂ ಹೆಚ್ಚಿನ ಜನರಿದ್ದು, ಇವರು ಧಾರ್ಮಿಕವಾಗಿ ಮುಂದುವರಿದಿದ್ದರೂ ಆರ್ಥಿಕವಾಗಿ ಹಿಂದುಳಿದಿದ್ದಾರೆ.

ಅವರಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿಯ ಅವಶ್ಯಕತೆ ಇದ್ದು, ಸರ್ಕಾರಕ್ಕೆ ಹಿಂದುಳಿದ ವರ್ಗದ 2ಎ ಮೀಸಲಾತಿ ಕಲ್ಪಿಸುವಂತೆ 23 ದಿನಗಳ ಕಾಲ ನಿರಂತರ ಧರಣಿ ಹಾಗೂ 87 ದಿನಗಳ ಕಾಲ ಪಾದಯಾತ್ರೆ ಮಾಡುವ ಮೂಲಕ ಸರ್ಕಾರಕ್ಕೆ ಹಕ್ಕೋತ್ತಾಯ ಮಾಡಲಾಗಿ ಸರ್ಕಾರ ಕೇಳಿರುವ ಅವಕಾಶ ಸೆ.15ಕ್ಕೆ ಮುಕ್ತಾಯಗೊಳ್ಳಲಿದೆ.

ಕಳೆದ ವರ್ಷ ಕಾನೂನು ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ನಮ್ಮನ್ನು ಭೇಟಿಮಾಡಿದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಅವರನ್ನು ಕರೆಸಿ ಚರ್ಚಿಸಿ ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿರುವ ಕುರಿತು ವರದಿ ಕೊಡುವಂತೆ ಸೂಚಿಸಿದ್ದಾರೆ.

ಇನ್ನು ಸರ್ಕಾರವನ್ನು ಜಾಗೃತಿಗೊಳಿಸಲು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಭಿಯಾನ ಹಮ್ಮಿಕೊಂಡು ಮೀಸಲಾತಿ ನೀಡಿದರೆ ಸಿಹಿ ಹಂಚಿ ಸಂಭ್ರಮಿಸಿ ಸರ್ಕಾರಕ್ಕೆ ಅಭಿನಂದನೆ ಹೇಳುತ್ತೇವೆ ತಪ್ಪಿದ್ದಲ್ಲಿ ಮತ್ತೆ ಧರಣಿ ಆರಂಬಿಸುತ್ತೇವೆ ಅದಕ್ಕಾಗಿ ಸಮಾಜವನ್ನು ಜಾಗೃತಗಳಿಸಲು ಹಳೆ ಮೈಸೂರು ಪ್ರಾಂತ್ಯದ ಮೈಸೂರು–ಕೊಡಗು–ಮಂಡ್ಯ–ಹಾಸನ ಜಿಲ್ಲೆಗಳಲ್ಲಿ ಪಾದಯಾತ್ರೆ ಆಯೋಜಿಸಿದ್ದು, ಮಲೆಮಹದೇಶ್ವರ ಬೆಟ್ಟದಿಂದ ಅಭಿಯಾನ ಆರಂಭವಾಗಿ ಇಂದು ಪಿರಿಯಾಪಟ್ಟಣ ಬಂದು ತಲುಪಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮೀಸಲಾತಿ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್, ಸಂಚಾಲಕರಾದ ಆಲನಹಳ್ಳಿ ಪುಟ್ಟಸ್ವಾಮಿ, ಮಲ್ಲೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಮಾಜಿ ಅಧ್ಯಕ್ಷರಾದ ಹಿಟ್ನಳ್ಳಿ ಪರಮೇಶ್, ಆವರ್ತಿ ಚಂದ್ರಶೇಖರ್, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ವಿರೂಪಾಕ್ಷ, ಮುಖಂಡರಾದ ಶಿವಯೋಗಿ, ಕೆ.ಎಲ್.ಸುರೇಶ್, ಶಿವಶಂಕರ್, ಪೆಪ್ಸಿ ಕುಮಾರ್, ಕೆಂಪಣ್ಣ, ಬಿಲ್ಲಹಳ್ಳಿ ಮಹದೇವ್ ಸಿದ್ದೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ