NEWSನಮ್ಮರಾಜ್ಯರಾಜಕೀಯ

ಮೈಸೂರು: ಗ್ಯಾಂಗ್ ರೇಪ್ ಪ್ರಕರಣಕ್ಕೆ ಸರ್ಕಾರದ ವೈಫಲ್ಯವೇ ಮೊದಲ ಕಾರಣ: ಮಾಜಿ ಮುಖ್ಯಮಂತ್ರಿ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸರ್ಕಾರದ ವೈಫಲ್ಯವೇ ಮೊದಲ ಕಾರಣ. ಪೊಲೀಸ್ ಇಲಾಖೆ ಅಮಾಯಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಜಿಲ್ಲೆಯ ಚನ್ನಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ವೇಳೆ ಮಾತನಾಡಿ, ಮೈಸೂರು ಗ್ಯಾಂಗ್ ರೇಪ್ ಸಂಬಂಧ ನಾನು ನಿನ್ನೆಯಿಂದ ಕಾಂಗ್ರೆಸ್- ಬಿಜೆಪಿ ನಾಯಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದೇನೆ. ಅದರ ಬಗ್ಗೆ ಪರ-ವಿರೋಧ ಚಟುವಟಿಕೆ ಗಮನಿಸಿದ್ದೇನೆ. ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ ಕೃತ್ಯ ನಡೆಯಬಾರದಿತ್ತು ಎಂದರು.

ಸಾರ್ವಜನಿಕವಾಗಿ ಮದ್ಯಪಾನಕ್ಕೆ ಅವಕಾಶ ಕೊಟ್ಟಿದ್ದೇ ತಪ್ಪು. ಹಳ್ಳಿ, ಹಳ್ಳಿಗಳಲ್ಲಿ ಮಟ್ಕಾ ದಂಧೆಗಳು ನಡೆಯುತ್ತಿವೆ. ಸರ್ಕಾರ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು ಎಂದು ಹೇಳಿದರು.

ಇನ್ನು ಉತ್ತರ ಪ್ರದೇಶ, ದೆಹಲಿಯಲ್ಲಿ ನಡೆದಂತಹ ಘಟನೆಗಳು ನಮ್ಮ ರಾಜ್ಯದಲ್ಲಿ ನಡೆಯುತ್ತಿವೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಇಂತಹ ಘಟನೆಗಳಿಗೆ ಸೂಕ್ತ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಗೃಹ ಇಲಾಖೆ ಒಂದು ಸೂಕ್ಷ್ಮ ಇಲಾಖೆ. ಈ ವಿಷಯದಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡಬೇಕು. ಆಂಧ್ರ ಪ್ರದೇಶದಲ್ಲಿ ಒಬ್ಬ ಅಧಿಕಾರಿ ಮಾಡಿದ ರೀತಿಯಲ್ಲಿ ನಮ್ಮಲ್ಲೂ ನಡೆಯಲಿ ಎಂದು ಅಭಿಪ್ರಾಯಪಟ್ಟರು.

ಗೃಹ ಸಚಿವರ ಹೇಳಿಕೆ ಗಮನಿಸಿದ್ದೇನೆ. ಆದರೆ ಅವರು ಯಾಕೆ ಆ ರೀತಿ ಮಾತನಾಡಿದ್ದಾರೋ ಗೊತ್ತಿಲ್ಲ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಪೊಲೀಸ್ ಇಲಾಖೆ ವಿಚಾರದಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷಕ್ಕೆ ಒಳ್ಳೆಯ ದಿನ ಬರಲಿದೆ
ಇನ್ನು ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವುದರಿಂದ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಹಿನ್ನಡೆ ಆಗುತ್ತದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಅವರು 2008 ರಲ್ಲಿ ಒಂದು ಕಾರಣ ಹೇಳಿಕೊಂಡು ಹೋಗಿದ್ದರು. ಇವಾಗ ಮತ್ತೊಂದು ಕಾರಣ ಹೇಳಿಕೊಂಡು ಹೋಗುತ್ತಿದ್ದಾರೆ ಅಷ್ಟೇ ಎಂದರು.

ನಾನು ಕಳೆದ ಎರಡು ದಿನಗಳಿಂದ ಉತ್ತರ ಕರ್ನಾಟಕ ಪ್ರವಾಸ ಮಾಡಿದ್ದೇನೆ, ಜನ ಜೆಡಿಎಸ್ ಪರವಾಗಿದ್ದಾರೆ. ಜನರು ಬಿಜೆಪಿ – ಕಾಂಗ್ರೆಸ್ ಪಕ್ಷಗಳ ನಡವಳಿಕೆಗಳನ್ನು ಗಮನಿಸುತ್ತಿದ್ದಾರೆ. ಜೆಡಿಎಸ್ ಪಕ್ಷವೇ ಸರಿ ಎನ್ನುತ್ತಿದ್ದಾರೆ. ಹಾಗಾಗಿ ಆ ವಿಚಾರದ ಬಗ್ಗೆ ಹೆಚ್ಚಿನದಾಗಿ ಏನು ಮಾತನಾಡುವುದಿಲ್ಲ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಜೆಡಿಎಸ್​ಗೆ ಯಾವ ಪಕ್ಷವೂ ಸಹ ಪೆಟ್ಟು ಕೊಡಲು ಸಾಧ್ಯವಿಲ್ಲ. ಮುಂದಿನ‌ ದಿನಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಒಳ್ಳೆಯ ದಿನ ಬರಲಿದೆ ಎಂದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ