NEWSಕ್ರೀಡೆದೇಶ-ವಿದೇಶ

ಸಚಿನ್‌ ತೆಂಡೂಲ್ಕರ್‌ ಅವರೊಟ್ಟಿಗೆ ಸಂಭ್ರಮಿಸಬೇಕು: ಭಾವಿನಾ ಪಟೇಲ್‌ ಮನದಾಸೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರಿಗೆ ಬೆಳ್ಳಿ ಪದಕ ತೋರಿಸಿ ಅವರೊಟ್ಟಿಗೆ ಸಂಭ್ರಮಾಚರಣೆ ಮಾಡಬೇಕು ಎಂಬ ಆಸೆ ಇದೆ ಎಂದು ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಬೆಳ್ಳಿ ಪದಕ ತಂದುಕೊಟ್ಟ ಭಾವಿನಾ ಪಟೇಲ್‌ ತಮ್ಮ ಮನದಾಸೆಯನ್ನು ಹೇಳಿಕೊಂಡಿದ್ದಾರೆ.

ಪ್ಯಾರಾ ಟೇಬಲ್‌ ಟೆನ್ನಿಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ ಭಾವಿನಾ ಅವರನ್ನು ಎನ್‌ಡಿಟಿವಿ ವರದಿಗಾರರು ಸಂದರ್ಶಿಸಿದರು. ಪದಕ ಗೆದ್ದ ಖುಷಿಯನ್ನು ಹಂಚಿಕೊಂಡ ಸಂದರ್ಭದಲ್ಲಿ, ʻಸಚಿವ ತೆಂಡೂಲ್ಕರ್‌ ಅವರನ್ನು ಹತ್ತಿರದಿಂದ ಮಾತನಾಡಿಸಬೇಕು. ಅವರಿಗೆ ಪದಕ ತೋರಿಸಬೇಕುʼ ಎಂಬ ಆಸೆಯನ್ನು ತೋಡಿಕೊಂಡಿದ್ದಾರೆ.

ಪದಕ ಗೆಲ್ಲುವ ಭರವಸೆ ಇಟ್ಟುಕೊಂಡು ಈ ಬಾರಿ ಹೆಚ್ಚಿನ ಪರಿಶ್ರಮ ಹಾಕಿ ತರಬೇತಿ ಪಡೆದೆ. ಪ್ಯಾರಾಲಿಂಪಿಕ್ಸ್‌ಗೆ ನನ್ನೊಟ್ಟಿಗೆ ಕೋಚ್‌ ಬರಲಿಲ್ಲ. ಆದರೆ, ದಿನದ 24ಗಂಟೆಯೂ ಅವರು ನನಗೆ ಸೂಕ್ತ ಮಾರ್ಗದರ್ಶನ ನೀಡಿದರು. ವಿಡಿಯೋ ಕರೆ ಮಾಡಿ ಸಾಕಷ್ಟು ಸಲಹೆಗಳನ್ನು ನೀಡಿದರು. ಪದಕದ ಗೆಲುವಿಗೆ ಅವರ ಕೊಡುಗೆಯೂ ಇದೆ ಎಂದು ಕೃತಜ್ಞತೆ ಸಲ್ಲಿಸಿದರು.

ವಿಶ್ವದಲ್ಲೇ ಬಹಳ ವೇಗವಾಗಿ ಆಡುವ 2ನೇ ಕ್ರೀಡೆ ಟೇಬಲ್‌ ಟೆನ್ನಿಸ್.‌ ಈ ಆಟ ಆಡಲು ಮನಸ್ಸನ್ನು ಕೇಂದ್ರೀಕರಿಸುವುದು ತುಂಬಾ ಮುಖ್ಯ. ಮನಸ್ಸನ್ನು ಕೇಂದ್ರೀಕರಿಸಲು ಹೆಚ್ಚಾಗಿ ಧಾನ್ಯ ಮಾಡುತ್ತೇನೆ. ಧ್ಯಾನವೇ ನನ್ನ ಯಶಸ್ಸಿನ ಗುಟ್ಟು ಎಂದು ತಿಳಿಸಿದರು.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ