NEWSನಮ್ಮಜಿಲ್ಲೆ

ಹೊಸಕೋಟೆ ಪಟ್ಟಣಕ್ಕೂ ಮೆಟ್ರೋ ರೈಲು ಸಂಚಾರ ವಿಸ್ತರಿಸಲು ಸಚಿವ ಎಂಟಿಬಿ ಮನವಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ಸಂಚಾರ ಸೇವೆವನ್ನು ವಿಸ್ತರಿಸಲು, ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್. ನಾಗರಾಜು (ಎಂಟಿಬಿ) ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿಂದು ನಡೆದ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಮೂಲಕ ಸಚಿವ ಎಂಟಿಬಿ ಮನವಿ ಸಲ್ಲಿಸಿದರು.

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಮೀ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್ ಗೆ ಹೊಸಕೋಟೆ ಪಟ್ಟಣ ತೀರ ಹತ್ತಿರದಲ್ಲಿದೆ. ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ.

ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳು ಇದ್ದು ಲಕ್ಷಾಂತರ ಅಪಾರ್ಟ್‌ಮೆಂಟ್ ಗಳು ಇವೆ. ಪರಿಣಾಮ ಹೊಸಕೋಟೆ ಪಟ್ಟಣದ ಸುತ್ತ- ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ. ಅಲ್ಲದೆ, ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ, ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲೂಕಿನ ಮೂಲಕ ಹಾದು ಹೋಗುತ್ತದೆ.

ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದು, ಅವರು ಬೆಂಗಳೂರಿಗೆ ತೆರಳಲು ಮೆಟ್ರೋ ರೈಲು ಸಂಚಾರ ಕಲ್ಪಿಸಿದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು.

ಹಾಗಾಗಿ, ಮೆಟ್ರೋ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಮಾಡುತ್ತೇನೆ ಎಂದು ಸಚಿವರಾದ ಎನ್. ನಾಗರಾಜು (ಎಂಟಿಬಿ) ಅವರು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ