NEWSನಮ್ಮರಾಜ್ಯರಾಜಕೀಯ

ಜನರನ್ನು ಹೆದರಿಸುವುದು ಅಕ್ರಮ: ಚಾಮರಾಜನಗರ ಡಿಸಿ ವಿರುದ್ಧ ಡಿಕೆಶಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಮೂಲ ಸೌಕರ್ಯಗಳನ್ನು ನೀಡುವುದಿಲ್ಲ ಎಂದು ಜನರನ್ನು ಹೆದರಿಸುವುದು ಅಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ನಿರೋಧಕ ಲಸಿಕಾ ಅಭಿಯಾನಕ್ಕೆ ವೇಗ ನೀಡಲು ನೋ ವ್ಯಾಕ್ಸಿನೇಷನ್- ನೋ ರೇಷನ್, ನೋ ಪೆನ್ಷನ್ ಎಂಬ ಜಾಗೃತಿ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕೋವಿಡ್ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಎಂದು ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತಿದೆ. ಅಂದರೆ ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಎಂಬ ಹೆದರಿಸುವುದು ಅಕ್ರಮ. ಈ ರೀತಿ ಮಾಡುವುದು ಅಸಂವಿಧಾನಿಕ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು. ಆಕ್ಸಿಜನ್ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ ಎಂದು ಕಿಡಿಕಾರಿದರು.

ಅಲ್ಲದೆ ಈಗ ಲಸಿಕೆ ಪಡೆಯದವರನ್ನು ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಅವರು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Leave a Reply

error: Content is protected !!
LATEST
KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ