NEWSನಮ್ಮರಾಜ್ಯರಾಜಕೀಯ

ಮುಂಬರುವ ವಿಧಾನಸಭಾ ಚುನಾವಣೆ- ಸೆ.28ರಂದು ಜೆಡಿಎಸ್‌ನ 102 ರಿಂದ110 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದ್ದು, ಇದೇ ಸೆಪ್ಟೆಂಬರ್‌ 28ರಂದು ಜೆಡಿಎಸ್‌ ಪಕ್ಷದ 102ರಿಂದ 110 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಬುಧವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 102 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಮುಂದಿನ 28 ದಿನಗಳಲ್ಲಿ ಮತ್ತೆ 8-10 ಅಭ್ಯರ್ಥಿಗಳು ಈ ಪಟ್ಟಿಗೆ ಸೇರುವ ನಿರೀಕ್ಷೆ ಇದೆ ಎಂದರು.

ಇನ್ನು ಸೆ.28ರಂದು ಬಿಡದಿಯ ತಮ್ಮ ತೋಟದ ಮನೆಯಲ್ಲೇ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಈ ಅಭ್ಯರ್ಥಿಗಳಿಗೆ ಎರಡು ದಿನದ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಅಲ್ಲಿ ತಮ್ಮ ಕ್ಷೇತ್ರಗಳಲ್ಲಿ ಯಾವರೀತಿ ನಡೆದುಕೊಳ್ಳಬೇಕು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಬೇಕು ಎಂಬ ಬಗ್ಗೆ ಕಾರ್ಯಾಗಾರ ನಡೆಯಲಿದೆ ಎಂದರು.

ಇನ್ನು ಉಳಿದಿರುವ 19 ತಿಂಗಳುಗಳಲ್ಲಿ ರಾಜ್ಯಾದ್ಯಂತ ಪ್ರವಾಸಮಾಡಲಾಗುವುದು. ಜತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕನಿಷ್ಠ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲ ನಾಯಕರು ಜೆಡಿಎಸ್‌ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮುಂದಿನ ದಿನಗಳಲ್ಲಿ ನಾಡಿನ ಜನರೆ ಉತ್ತರ ಕೊಡಲಿದ್ದಾರೆ ಎಂದು ತಿರುಗೇಟು ನೀಡಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ