ನ್ಯೂಡೆಲ್ಲಿ: ಸಾರ್ವಜನಿಕರನ್ನು ಖಾಲಿಹೊಟ್ಟೆ ಯಲ್ಲಿ ಮಲಗುವಂತೆಮಾಡುತ್ತಿರುವವರು, ತಾವುಮಾತ್ರ ಸ್ನೇಹಿತರ ನೆರಳಿನಲ್ಲಿ ಮಲಗುತ್ತಿದ್ದಾರೆ ಎಂದು ಗೃಹ ಬಳಕೆಯ ಅಡುಗೆ ಅನಿಲದ ದರ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶದ ಜನರು ಒಗ್ಗಟ್ಟಿನಿಂದ ಹೋರಾಡಲಿದ್ದಾರೆ. ಇದು ನಿಮಗೆ ಎಚ್ಚರಿಕೆಯ ಗಂಟೆಯಾಗಬೇಕು. ಇನ್ನಾದರೂ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಿ ಬಡವರ ಬದುಕನ್ನು ಹಸನಾಗಿಸಿ ಎಂದು ಅಗ್ರಹಿಸಿದ್ದಾರೆ.
“#IndiaAgainstBJPLoot” ಹ್ಯಾ ಷ್ ಟ್ಯಾ ಗ್ನೊಂದಿಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ದೇಶದ ನಾಲ್ಕು ಮಹಾನಗರಗಳಲ್ಲಿ ಕಳೆದ ಜನವರಿಯಿಂದ ಗೃಹಬಳಕೆಯ ಎಲ್ಪಿಜಿ ದರ ಹೆಚ್ಚಿ ಸಿರುವ ಪಟ್ಟಿಯನ್ನೂ ಟ್ಯಾಗ್ ಮಾಡಿದ್ದಾರೆ.
ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸಿಲಿಂಡರ್ಗಳ ಮೇಲಿನ ದರ ಏರಿಕೆ ಕುರಿತು ಕೇಂದ್ರ ದ ವಿರುದ್ಧ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ, ಇವುಗಳ ಮೇಲಿನ ತೆರಿಗೆಗಳನ್ನು ಕಡಿತಗೊಳಿಸುವಂತೆಯೂ ಒತ್ತಾಯಿಸುತ್ತಾ ಬಂದಿದೆ. ಈಗ ಪುನಃ ಎಲ್ಪಿಜಿ ದರ ಏರಿಸಿರುವುದರ ವಿರುದ್ಧ ಧ್ವನಿ ಎತ್ತಿದೆ. ಆದರೂ ಸರ್ಕಾರಕ್ಕೆ ಬಡವರ ಕೂಗು ಕೇಳಿಸುತ್ತಿಲ್ಲ.
जनता को भूखे पेट सोने पर मजबूर करने वाला ख़ुद मित्र-छाया में सो रहा है…
लेकिन अन्याय के ख़िलाफ़ देश एकजुट हो रहा है।#IndiaAgainstBJPLoot pic.twitter.com/ifFJVeUg7W— Rahul Gandhi (@RahulGandhi) September 1, 2021