NEWSನಮ್ಮರಾಜ್ಯರಾಜಕೀಯ

ಜೆಡಿಎಸ್‌ ಮುಳುಗುತ್ತಿರುವ ಹಡಗಲ್ಲ ಎಂಬುದನ್ನು ತೋರಿಸಲು ಇಂದಿನಿಂದಲೇ ಸಿದ್ಧರಾಗಬೇಕಿದೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಳೇಯ ಮೈಸೂರು ಪ್ರದೇಶದಲ್ಲಿ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ತುಮಕೂರಿನ ಒಕ್ಕಲಿಗ ನಾಯಕ ಬಿಇಎಂಎಲ್ ಕಾಂತರಾಜು ಕಾಂಗ್ರೆಸ್ ನ ಪ್ರಭಾವಿ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಇದು ಭಾರಿ ಚರ್ಚೆ ಆಗುತ್ತಿದ್ದು, ಮುಂದಿನ ಅವರ ನಡೆ ಎತ್ತಕಡೆ….

ಈ ನಡುವೆ ಇತ್ತ, ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೀಡಿದ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಖಾರವಾಗಿಯ ಪ್ರತಿಕ್ರಿಯಿಸಿದ್ದರು. ಈಗಿನ ಈ ಜೆಡಿಎಸ್‌ ಮುಖಂಡರ ನಡೆ ನೋಡಿದೆ ಪಕ್ಷ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುವುದಕ್ಕೆ ಕುಮಾರಸ್ವಾಮಿ ಅವರೇ ಉತ್ತರ ನೀಡಬೇಕಿದೆ.

ಇನ್ನು ಕಾಂತರಾಜ್‌ ಅವರು, ನಾನು ನನ್ನ ರಾಜಕೀಯ ವೃತ್ತಿ ಜೀವನವನ್ನು ರೂಪಿಸಿಕೊಳ್ಳಬೇಕಾಗಿದೆ, ಈಗಾಗಲೇ ನಾನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪರಮೇಶ್ವರ್ ಅವರನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಅದೇ ರೀತಿ ಮುಂಬರುವ ಚುನಾವಣೆಗೂ ಮೊದಲು ಕೆಲವು ಜೆಡಿಎಸ್ ನಾಯಕರು ತಮ್ಮ ರಾಜಕೀಯ ನಡೆಗಳ ಬಗ್ಗೆ ಮಾತನಾಡುತ್ತಿದ್ದು, ಅವರನ್ನು ಪಕ್ಷದಲ್ಲೇ ಮುಂದುವರಿಸಿದರೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೀಡಿದ ಹೇಳಿಕೆ ಸತ್ಯವಾಗಿ ಬಿಡುತ್ತದೆ. ಆದ್ದರಿಂದ ಈಗಲೇ ಜೆಡಿಎಸ್‌ ವರಿಷ್ಠರು ಇಂಥ ಹುಳುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನಿಷ್ಠಾವಂತ ಕಾರ್ಯಕರ್ತರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಕೆಲ ಜೆಡಿಎಸ್‌ ಮುಖಂಡರು ಎನಿಸಿಕೊಂಡವರು ಪಕ್ಷವನ್ನು ದುರ್ಬಲಗೊಳಿಸುವುದಕ್ಕೆ ಮುಂದಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ದೂರವಿಟ್ಟು ಪಕ್ಷಕ್ಕೆ ನಿಷ್ಠರಾದವರನ್ನು ಗುರುತಿಸಿ ಮುಂದಿನ ವರ್ಷ ನಗರ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆ ಎಲ್ಲ ಸ್ಥಾನಗಳಿಗೂ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

25 ಎಂಎಲ್ ಸಿಗಳ ಅವಧಿ ಜನವರಿ 2022 ರಲ್ಲಿ ಕೊನೆಗೊಳ್ಳುತ್ತದೆ. ಅಷ್ಟರೊಳಗೆ ಪಕ್ಷದ ವರಿಷ್ಠರು ಪಕ್ಷಕ್ಕೆ ಮಾರಕವಾಗಿರುವವರನ್ನು ಈಗಿನಿಂದಲೇ ದೂರವಿಟ್ಟು ಪಕ್ಷನಿಷ್ಠರನ್ನು ಸ್ಥಳೀಯ ಕಾರ್ಯಕರ್ತರ ಸಮ್ಮುಖದಲ್ಲಿ ಗುರುತಿಸಿ ಅವರಿಗೆ ಟಿಕೆಟ್‌ ನೀಡಬೇಕು ಎಂದು ಹೇಳುತ್ತಿದ್ದಾರೆ.

ಇನ್ನು ಈಗಾಗಲೇ ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದಾರೆ, ಜಿಟಿಡಿ ತಮ್ಮ ಮಗನನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ.

ಅಲ್ಲದೆ, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಕೂಡ ಶಿವಕುಮಾರ್ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಈ ನಡುವೆ ಪಕ್ಷದಲ್ಲೇ ಎಲ್ಲವನ್ನು ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಬಗೆದು ಹೋಗಲು ತುದಿಗಾಲಲ್ಲಿ ನಿಂತಿದ್ದಾರೆ. ಇವರಿಂದ ಮುಂದಿನ ದಿನಗಳಲ್ಲಿ ಪಕ್ಷ ಕಟ್ಟಲು ಸಾಧ್ಯವೇ?  ಹೀಗಾಗಿ ಅವರನ್ನು ಪಕ್ಷದ ಕಾರ್ಯಗಳಿಂದ ಬಿಡುಗಡೆಗೊಳಿಸುವುದೇ ಉತ್ತಮ ಎಂಬ ಸ್ಥಳೀಯ ಕಾರ್ಯಕರ್ತರು ಸಲಹೆ ನೀಡುತ್ತಿದ್ದಾರೆ.

ಹೀಗಾಗಿ ಪಕ್ಷ ತೊರೆಯಲು ಇಚ್ಛಿಸುವವರು ಬಿಡಬಹುದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿದ್ದು, ಪಕ್ಷದಲ್ಲಿ ಜೊಳ್ಳಾಗಿರುವ ಎಲ್ಲರೂ ಪಕ್ಷ ಬಿಟ್ಟು ಹೋದರೆ ಮುಂದಿನ ವಿಧಾನ ಸಭಾ ಚುನಾವಣೆಗೆ ನಿಷ್ಠರನ್ನು ಆಯ್ಕೆ ಮಾಡಿಕೊಳ್ಳುವ ಕೆಲಸವೂ ಸುಲಭವಾಗಲಿದೆ ಎಂಬುದನ್ನು ಪಕ್ಷದ ನಾಯಕರು ಯೋಚಿಸಬೇಕಿದೆ ಎಂದು ಹೇಳುತ್ತಿದ್ದಾರೆ.

ಒಟ್ಟಾರೆ ಜೆಡಿಎಸ್‌ನಲ್ಲಿ ಇರುವ ಕೆಲ ನಾಕಯಕರು ತಮ್ಮ ಬೇಳೆ ಬೇಯಿಸಿಕೊಳ್ಳುವುದಕ್ಕಾಗಿ ಬೇರೆ ಪಕ್ಷಗಳಿಗೆ ವಲಸೆ ಹೋಗಲು ತುದಿಗಾಲಲ್ಲಿ ನಿಂತಿದ್ದಾರೆ ಅವರನ್ನು ಶೀಘ್ರವಾಗಿ ಹೋಗಲು ಬಿಟ್ಟು ರಾಜ್ಯದ 224 ವಿಧಾನಸಭಾಕ್ಷೇತ್ರಗಳಲ್ಲೂ ಪಕ್ಷ ನಿಷ್ಠ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಈಗಿನಿಂದಲೇ ಸಿದ್ಧರಾಗಬೇಕು. ಏಕೆಂದರೆ ಯುದ್ಧಕಲೇ ಶಸ್ತ್ರಾಭ್ಯಾಸ ಎಂಬಂತಾಗಬಾರದು ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ ಪಕ್ಷದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದರೆ ಎಂಎಲ್‌ಸಿ ಚುನಾವಣೆ, ಜಿಲ್ಲಾ ಮತ್ತು ತಾಲೂಪಂಚಾಯ್ತಿ ಚುನಾವಣೆಗಳ ಮೇಲೆ ಪಕ್ಷಕ್ಕೆ ಭಾರಿ ಹೊಡೆತ ಬೀಳ ಬಹುದು. ಹೀಗಾಗಿ ಜೂನ್ 2022 ರಲ್ಲಿ ನಡೆಯಲಿರುವ 25 ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಂದಿನಿಂದಲೇ ಕಾರ್ಯ ಪ್ರವೃತ್ತರಾಗಿ ಎನ್ನುತ್ತಿದ್ದಾರೆ ಕಾರ್ಯಕರ್ತರು.

ಅತಾಯಗತಾಯ 2023ರ ಚುನಾವಣೆಯಲ್ಲಿ ಜೆಡಿಎಸ್‌ಅನು ಅಧಿಕಾರಕ್ಕೆ ತರಬೇಕು ಎಂದು ಬರಿ ಮಾತನಲ್ಲೇ ಹೇಳಿದರೆ ಸಾಲದು ಆ ನಿಟ್ಟಿನಲ್ಲಿ ತಳಪಟ್ಟದಿಂದಲೇ ಕಾರ್ಯಕರ್ತರುನ್ನು ಒಗ್ಗೂಡಿಸುವ ಕೆಲಸ ಮಾಡಬೇಕು. ಇದರಿಂದ ಸ್ಥಳೀಯವಾಗಿ ನಮಗು ಆನೆ ಬಲ ಬರಲಿದೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ