NEWSದೇಶ-ವಿದೇಶರಾಜಕೀಯ

ರಾಷ್ಟ್ರೀಯ ಸಮಸ್ಯೆಗಳ ಕುರಿತ ನಿರಂತರ ಆಂದೋಲನಕ್ಕೆ ಕಾಂಗ್ರೆಸ್‌ನಿಂದ ಉನ್ನತ ಮಟ್ಟದ ಸಮಿತಿ ರಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಬಿಜೆಪಿ ಸರ್ಕಾರ ಪ್ರತಿ ತಿಂಗಳು ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿ ಸುತ್ತಿದೆ. ಮೂರು-ನಾಲ್ಕು ತಿಂಗಳಲ್ಲಿ ಪೆಟ್ರೋ ಲ್ ಮತ್ತು ಡೀಸೆಲ್ ಬೆಲೆಯನ್ನು 60 ರಿಂದ 70 ಬಾರಿ ಹೆಚ್ಚಿ ಸಲಾಗಿದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.

ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು 19 ರಾಜಕೀಯ ಪಕ್ಷಗಳ ನಾಯಕರು ಸೆಪ್ಟೆಂಬರ್ 20ರಿಂದ 30 ರವರೆಗೆ ದೇಶದಾದ್ಯಂತ ಜಂಟಿಯಾಗಿ ಪ್ರತಿಭಟನೆ ಆಯೋಜಿಸುವುದಾಗಿ ಆ.20 ರಂದು ಘೋಷಿಸಿದ ನಂತರ ರಾಷ್ಟ್ರೀಯ ಸಮಸ್ಯೆಗಳ ಕುರಿತು ನಿರಂತರ ಆಂದೋಲನಗಳನ್ನು ನಡೆಸಲು ಕಾಂಗ್ರೆಸ್ ಪಕ್ಷವೂ ಪ್ರಿಯಾಂಕಾ ಗಾಂಧಿ ಜತೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಈ ಸಮಿತಿಯಲ್ಲಿ ಬಿಜೆಪಿಯ ಕಟು ಹಿಂದುತ್ವ ರಾಜಕಾರಣದ ಟೀಕಾಕಾರರಾದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್ ಅವರನ್ನು ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಪ್ರಿಯಾಂಕಾ ಹೊರತುಪಡಿಸಿ, ಒಂಬತ್ತು ಸದಸ್ಯರ ಸಮಿತಿಯಲ್ಲಿ ಸಂಸದ ಉತ್ತಮ್ ಕುಮಾರ್ ರೆಡ್ಡಿ , ರಾಜ್ಯ ಸಭಾ ಸಂಸದ ರಿಪುನ್ಬೋರಾ, ಮನೀಶ್ ಚತ್ರ ಥ, ಬಿ.ಕೆ ಹರಿಪ್ರಸಾದ್, ಉದಿತ್ ರಾಜ್, ರಾಗಿಣಿ ನಾಯಕ್ ಮತ್ತು ಜುಬೇರ್ ಖಾನ್ ಇದ್ದಾರೆ.

ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲಿರುವ ಈ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕರಡು ರಚನೆಯು ಮಹತ್ವ ಪಡೆದುಕೊಂಡಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವ್ಯಾಪ್ತಿ ಮೀರಿದ ಸಮಸ್ಯೆಗಳನ್ನು ಅಧಿಕೃತವಾಗಿ ಕೈಗೆತ್ತಿಕೊಳ್ಳುತ್ತಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ