NEWSನಮ್ಮಜಿಲ್ಲೆರಾಜಕೀಯ

ಇಂದು ಮತದಾನ ನಡೆದ ಹಲವು ವಾರ್ಡ್‌ಗಳಲ್ಲಿ ಅಕ್ರಮ: ಮರು ಮತದಾನಕ್ಕೆ ಎಎಪಿ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಕ್ರಮ ಕಂಡುಬಂದ ವಾರ್ಡ್‌ಗಳಲ್ಲಿ ಮರು ಮತದಾನ ನಡೆಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿಯ ರಾಜ್ಯ ಸಹ ಸಂಚಾಲಕ ಮೋಹನ್‌ ದಾಸರಿ, “ಹುಬ್ಬಳ್ಳಿಯ ಕೋಟಿಲಿಂಗ ನಗರ ವಾರ್ಡ್‌ ನಂ. 52ರಲ್ಲಿ ರಸ್ತೆ ಬದಿಯಲ್ಲೇ ಮತದಾರರಿಗೆ ಹಣ ಹಂಚುತ್ತಿರುವುದು ಕಂಡುಬಂದಿದೆ.

ಘಟನೆಯು ವಿಡಿಯೋದಲ್ಲಿ ಸೆರೆಯಾಗಿದ್ದು, ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಬೆಳಗಾವಿಯ ವಾರ್ಡ್‌ ನಂ. 3ರಲ್ಲಿ ಮಹಿಳೆಯ ಹೆಸರಿನಲ್ಲಿ ಪುರುಷರು ಬೋಗಸ್‌ ಮತ ಚಲಾಯಿಸಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಭಾರೀ ಪ್ರಮಾಣದಲ್ಲಿ ಅಕ್ರಮ ನಡೆಸಿ, ಪ್ರಜಾಪ್ರಭುತ್ವದ ಆಶಯವನ್ನೇ ಬುಡಮೇಲು ಮಾಡಲು ಯತ್ನಿಸುತ್ತಿವೆ” ಎಂದು ಹೇಳಿದರು.

ಅಕ್ರಮವನ್ನು ಚುನಾವಣಾ ಆಯೋಗದ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಯಾರೂ ಕೂಡ ಮತದಾನವನ್ನು ಸ್ಥಗಿತಗೊಳಿಸಲು ಮುಂದಾಗಿಲ್ಲ. ಆಯೋಗವು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದೆ.

ನೇರವಾಗಿ ಚುನಾವಣೆ ಎದುರಿಸುವ ತಾಕತ್ತಿಲ್ಲದ ಪಕ್ಷಗಳು ಚುನಾವಣಾ ಆಯೋಗದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುತ್ತಿದ್ದು, ಸೂಕ್ತ ತನಿಖೆ ನಡೆಸಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸದ್ಯ ಅಕ್ರಮ ಕಂಡುಬಂದಿರುವ ಎರಡು ವಾರ್ಡ್‌ಗಳಲ್ಲಿ ಮರುಮತದಾನ ನಡೆಸಬೇಕು ಎಂದು ಮೋಹನ್‌ ದಾಸರಿ ಆಗ್ರಹಿಸಿದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ