ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದೇವನಗುಂದಿಯಲ್ಲಿರುವ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್, ಎಚ್ಪಿಸಿಎಲ್ ಗ್ರೀನ್ ಫೀಲ್ಡ್ ಆರ್ & ಡಿ ಕೇಂದ್ರಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಬಳಿಕ ಅಧಿಕಾರಿಗಳೊಂದಿಗೆ ಎಚ್ಪಿಸಿಎಲ್ ಗ್ರೀನ್ ಫೀಲ್ಡ್ ಆರ್ & ಡಿ ಕೇಂದ್ರಕ್ಕೆ ಸಂಬಂಧಿಸಿದಂತೆ ಸಂಪರ್ಕ ರಸ್ತೆ, ಭೂಮಿ, ವಿದ್ಯುತ್ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಸಭೆ ನಡೆಸಿದರು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಅಮಿತಾ ಪ್ರಸಾದ್, ಲೋಕೋಪಯೋಗಿ ಇಲಾಖಾ ಕಾರ್ಯದರ್ಶಿ ಡಾ.ಕೆ.ಎಸ್.ಕೃಷ್ಣರೆಡ್ಡಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ.ಆರ್.ರವಿಕುಮಾರ್, ಕೆ.ಐ.ಎ.ಡಿ.ಬಿಯ ಸಿ.ಇ.ಒ ಡಾ.ಎನ್.ಶಿವಶಂಕರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ವೆಂಕಟೇಶ್ ಸೇರಿದಂತೆ ಎಚ್.ಪಿ.ಸಿ.ಎಲ್ ನ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.