NEWSನಮ್ಮಜಿಲ್ಲೆ

ಆನ್‌ಲೈನ್ ಸೇವೆಗಳ ಮೂಲಕ ಜನರಿಗೆ ತ್ವರಿತವಾಗಿ ಸೌಲಭ್ಯ ತಲುಪಿಸಿ: ಅಪರ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವಂತಹ ಮಹತ್ವಾಕಾಂಕ್ಷೆಯ ವಿವಿಧ ಆನ್‌ಲೈನ್ (ಡಿಜಿಟಲ್) ಸೇವೆಗಳ ಮೂಲಕ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ತಲುಪಿಸಬೇಕು ಎಂದು‌ ಅಪರ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್ ತಿಳಿಸಿದರು.

ಹೊಸಕೋಟೆ ತಾಲೂಕು ಕಚೇರಿ ಸಭಾಂಗಣದಲ್ಲಿಂದು ನಡೆದ ಆನ್‌ಲೈನ್ ಸೇವೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ನಿಗದಿತ ಕಾಲಮಿತಿಯೊಳಗೆ ಅಧಿಕಾರಿಗಳು ಸೇವೆಗಳನ್ನು ಒದಗಿಸುವ ಮೂಲಕ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವಂತಾಗಬೇಕು ಎಂದರು.

ಸಕಾಲ ಯೋಜನೆಯಡಿ ಒದಗಿಸ ಬಹುದಾದಂತಹ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಿಂಚಣಿ, ಆರ್.ಸಿ.ಸಿ.ಎಂ.ಎಸ್ ಸೇವೆ, ಸಾಲ ಮನ್ನಾ, ಬೆಳೆ ಸಮೀಕ್ಷೆ, ಬೆಳೆ ಪರಿಹಾರ ಸೇರಿದಂತೆ ಇನ್ನಿತರೆ ಆನ್‌ಲೈನ್ ಸೇವೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಅದರ ಸದುಪಯೋಗ ಪಡಿಸಿಕೊಳ್ಳಲು ಉತ್ತೇಜಿಸುವಂತೆ ತಿಳಿಸಿದರು.

ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ತಹಸೀಲ್ದಾರ್ ಗೀತಾ, ಆರ್.ಎಚ್.ಎಂ ಗಂಗಾಧರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಎನ್.ಎಸ್.ಮಹೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ