Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಪರಿಶಿಷ್ಟರ ಕಲ್ಯಾಣ ಪ್ರಗತಿ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ-ಡಿಸಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಅನುಸೂಚಿತ ಜಾತಿಗಳ ಮತ್ತು ಬುಡಕಟ್ಟು ಉಪಯೋಜನೆಯಡಿ ವಿವಿಧ ಇಲಾಖೆಯಡಿ ಕೈಗೊಳ್ಳಲಾದ ಕಾರ್ಯಕ್ರಮಗಳ ಪ್ರಗತಿ ಮಾಹಿತಿ ನೀಡದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಆಯಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಖಡಕ್ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಘಟಕ ಮತ್ತು ಬುಡಕಟ್ಟು ಉಪಯೋಜನೆಯಡಿ ವಿವಿಧ 37 ಇಲಾಖೆಗಳು ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

ಪ್ರತಿ ತಿಂಗಳು ಐದನೇ ತಾರೀಖಿನೊಳಗಾಗಿ ಸಾಧನೆಯ ಮಾಹಿತಿ ನೀಡುವಂತೆ ಲಿಖಿತ ಸೂಚನೆ ನೀಡಿದ್ದಾಗ್ಯೂ ಹತ್ತಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ವರದಿ ಸಲ್ಲಿಸಿದ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೆಲಸ ಅಧಿಕಾರಿಗಳು ಸಭೆಗೆ ಗೈರಾಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಅಧಿಕಾರಿಗಳ ಮೇಲೆ ಎಸ್.ಸಿ., ಎಸ್.ಟಿ. ಅಧಿನಿಯಮ 2013ರನ್ವಯ ಶಿಸ್ತು ಕ್ರಮಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದಾಗಿ ತಿಳಿಸಿದರು.

ಭೂ ಒಡೆತನ ಯೋಜನೆಯಡಿ ಪರಿಶಿಷ್ಟ ಫಲಾನುಭವಿಗಳಿಗೆ ಭೂಮಿ ಖರೀದಿಸಿ ವಿತರಿಸುವುದು ಒಳಗೊಂಡಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಫಲಾನುಭವಿಗಳ ಆಧಾರಿತ ಕಾರ್ಯಕ್ರಮಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಬೇಕು. ತ್ವರಿತವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ವಿವಿಧ ಇಲಾಖೆ ಹಾಗೂ ನಿಗಮಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕಾಗಿ ವಿಶೇಷ ಘಟಕ ಮತ್ತು ಬುಡಕಟ್ಟು ಉಪಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಆಯಾ ಜನಾಂಗದ ಅಭಿವೃದ್ಧಿಗಾಗಿ ಬಳಕೆಮಾಡಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಕಾಲೋನಿಯ ಅಭಿವೃದ್ಧಿಗಾಗಿ ಮಂಜೂರಾದ ಕಾಮಗಾರಿಗಳ ಅನುದಾನದಲ್ಲಿ ಸಾಮಾನ್ಯ ವರ್ಗದ ಕಾಲೋನಿಗಳಲ್ಲಿ ಕಾಮಗಾರಿ ಕೈಗೊಂಡಿರುವ ದೂರುಗಳು ಬರುತ್ತಿವೆ. ಈ ರೀತಿ ಆಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ.ಕ್ರಿಯಾಯೋಜನೆಗೆ ಅನುಮೋದನೆ: ಜಿಲ್ಲೆಯ ಶೇಕಡಾ 50ಕ್ಕೂ ಹೆಚ್ಚು ಪ್ರಮಾಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರು ವಾಸಿಸುವ 82 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ವಿಶೇಷ ಘಟಕ ಹಾಗೂ ಬುಡಕಟ್ಟು ಉಪಯೋಜನೆಯಡಿ ಜಿಲ್ಲಾ ಪಂಚಾಯಿತಿನಿಂದ ತಯಾರಿಸಲಾದ ರೂ.88.76 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾಯೋಜ ರೂಪಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ತಿಳಿಸಿದರು.

ಸದರಿ ಕ್ರಿಯಾ ಯೋಜನೆಯನ್ನು ಸಭೆಯಲ್ಲಿ ಪರಿಶೀಲಿಸಿ ಅನುಮೋದನೆ ನೀಡಲಾಯಿತು.

ಹೈಮಾಸ್ಕ್ ದೀಪ ಅಳವಡಿಕೆ: 2020-21ನೇ ಕಾಲೋನಿ ಅಭಿವೃದ್ಧಿ ಯೋಜನೆಯಡಿ ತಲಾ ರೂ.15 ಲಕ್ಷ ವೆಚ್ಚದಲ್ಲಿ ಹಾವೇರಿ ಹಾಗೂ ಸವಣೂರ ವಿಧಾನಸಭಾ ಕ್ಷೇತ್ರದ ಆಯ್ದ ಗ್ರಾಮಗಳ ಪರಿಶಿಷ್ಟ ಕಾಲೋನಿಗಳಿಗೆ ಹೈಮಾಸ್ಕ್ ಬೀದಿ ದೀಪ ಅಳವಡಿಕೆ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ರೂ.51 ಕೋಟಿ ವೆಚ್ಚ: ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಹಾಗೂ ಬುಡಕಟ್ಟು ಉಪಯೋಜನೆಯಡಿ ವಿವಿಧ 37 ಇಲಾಖೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕಾಗಿ ರೂ.103.12 ಕೋಟಿ ನಿಗದಿಪಡಿಸಲಾಗಿದೆ.

ಈ ಪೈಕಿ ರೂ.86.35 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಆಗಸ್ಟ್ ತಿಂಗಳಾಂತ್ಯದವರೆಗೆ ರೂ.51.12 ಕೋಟಿ ವೆಚ್ಚ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ