NEWS

ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಬಹುದು: ಸಚಿವ ಎಸ್.ಅಂಗಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಿ ಬಳಕೆ ಮಾಡುವ ಆಸ್ಟ್ರೇಲಿಯಾದ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಉಪಯೋಗಿಸಲಾಗುತ್ತಿದೆ ಎಂದು ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಆಳಸಮುದ್ರ ಮೀನುಗಾರಿಕೆಗೆ ತೆರಳುವ ಮೀನುಗಾರರು 10ಕ್ಕೂ ಹೆಚ್ಚು ದಿನಗಳ ಕಾಲ ಸಮುದ್ರದಲ್ಲೇ ಇರಬೇಕಾಗುತ್ತದೆ. ಆ ವೇಳೆ ಸಮುದ್ರದ ನೀರು ಕುಡಿಯಲು ಯೋಗ್ಯವಲ್ಲದ ಕಾರಣ ಒಂದು ವಾರದ ಬಳಕೆಗೆ ಬೇಕಾದ ಸಿಹಿ ನೀರನ್ನು ಹೋಗುವಾಗಲೇ ಬೋಟ್‍ನಲ್ಲಿ ಸಂಗ್ರಹಿಸಿ ಕೊಂಡೊಯ್ಯುತ್ತಿದ್ದರು.

ಆದರೆ ಇನ್ಮುಂದೆ ಈ ರೀತಿ ಕೊಂಡೊಯ್ಯುವ ಬದಲು ಸಮುದ್ರದ ಉಪ್ಪು ನೀರನ್ನೇ ಸಿಹಿ ನೀರಾಗಿ ಪರಿವರ್ತಿಸಿ ಬಳಕೆ ಮಾಡಲು ಆಸ್ಟ್ರೇಲಿಯಾದ ಈ ತಂತ್ರಜ್ಞಾನವನ್ನು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಜಾರಿಗೊಳಿಸಲಾಗಿದೆ. ಈ ರೀತಿ ಬೋಟ್‍ನಲ್ಲಿಯೇ ಉಪ್ಪು ನೀರನ್ನು ಸಿಹಿ ನೀರಾಗಿ ಫಿಲ್ಟರ್ ಮಾಡುವ ತಂತ್ರಜ್ಞಾನದ ಪ್ರಾತ್ಯಕ್ಷಿತೆಯನ್ನು ನಡೆಸಲಾಯಿತು ಎಂದು ತಿಳಿಸಿದರು.

ಇನ್ನು ಈ ತಂತ್ರಜ್ಞಾನ ಅಮೆರಿಕ, ಯುರೂಪ್‍ನಲ್ಲಿ ಈಗಾಗಲೇ ಬಳಕೆಯಲ್ಲಿದೆ. ಆಸ್ಟ್ರೇಲಿಯಾ ಮೂಲದ ರೆಯಾನ್ಸ್ ಎಂಬ ಕಂಪನಿ ಈ ಕಿಟ್‍ನ್ನು ತಯಾರಿಸುತ್ತಿದೆ. ಇಲ್ಲಿ ಬೋಟ್ ಸಂಚರಿಸುವಾಗಲೇ ಉಪ್ಪು ನೀರನ್ನು ಪೈಪ್ ಮೂಲಕ ಸಂಗ್ರಹಿಸಲಾಗುತ್ತೆ. ಪೈಪ್‍ನಿಂದ ಬಂದ ಉಪ್ಪು ನೀರು ಶುದ್ದೀಕರಿಸುವ ಯಂತ್ರದ ಒಳಗೆ ಪಂಪ್ ಆಗಿ ಬಳಿಕ ಫಿಲ್ಟರ್ ಆಗಿ ಸಿಹಿ ನೀರು ಇನ್ನೊಂದು ಪೈಪ್ ಮೂಲಕ ಹೊರ ಬರುತ್ತೆ.

ಈ ರೀತಿ ಗಂಟೆಗೆ 168 ಲೀಟರ್ ನೀರು ಫಿಲ್ಟರ್ ಆಗಲಿದ್ದು, ದಿನವೊಂದಕ್ಕೆ 2000 ಲೀ. ನೀರು ಫಿಲ್ಟರ್ ಆಗುತ್ತೆ. ಇದರಿಂದ ಸದ್ಯ ನೀರು ಸಂಗ್ರಹಿಸಿಡಲು ಬೋಟ್‍ನಲ್ಲಿ ಸ್ಥಳವಕಾಶ ಸಮಸ್ಯೆ ಜೊತೆ ಅಧಿಕ ಭಾರದ ಹೊರೆ ತಪ್ಪಿದಂತಾಗುತ್ತದೆ. ಮೀನುಗಾರರಿಗೆ ನಿತ್ಯ ಬಳಕೆಗೆ ಇದೇ ನೀರನ್ನು ಬಳಸಬಹುದಾಗಿದ್ದು, ಸಿಹಿ ನೀರು ಮುಗಿಯುತ್ತೆ ಎಂಬ ಆತಂಕವು ಇರೋದಿಲ್ಲ ಕಂಪನಿ ತಿಳಿಸಿದೆ.

ಈ ಯಂತ್ರಕ್ಕೆ 4.60 ಲಕ್ಷ ರೂ. ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುವ ನಿರ್ಧಾರ ಮಾಡಿದೆ. ಇದೀಗ ರಾಜ್ಯ ಸರ್ಕಾರವೂ ಬೋಟ್ ಮಾಲೀಕರಿಗೆ ಈ ಯಂತ್ರ ಅಳವಡಿಕೆಗೆ ವಿಶೇಷ ಅನುದಾನ ನೀಡುವ ಚಿಂತನೆ ನಡೆಸಿದೆ. ಒಟ್ಟಿನಲ್ಲಿ ಇನ್ಮುಂದೆ ಮೀನುಗಾರರಿಗೆ ಸಿಹಿ ನೀರು ಸಮುದ್ರದಲ್ಲೇ ಲಭ್ಯವಾಗಲಿದ್ದು ಸಿಹಿ ನೀರಿನ ಆಭಾವ ತಪ್ಪಲಿದೆ ಎಂದು ಸಚಿವರು ತಿಳಿಸಿದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ