CrimeNEWSನಮ್ಮರಾಜ್ಯ

ಆನ್‌ಲೈನ್ ಜೂಜಾಟ ನಿಷೇಧಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅಸ್ತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಆನ್‌ಲೈನ್ ಜೂಜಾಟ ನಿಷೇಧಕ್ಕೆ ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಈ ಸಂಬಂಧ ಮುಂದಿನ ಅಧಿವೇಶನದ ವೇಳೆ ಸದನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸಲಾಗುವುದು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈ ಸಂಬಂಧ ಪೊಲೀಸ್‌ ಕಾಯ್ದೆಗೆ ತಿದ್ದುಪಡಿ ತರಲೂ ಸಹ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡಿದೆ. ಲಾಟರಿ ಹೊರತುಪಡಿಸಿ, ಕಂಪ್ಯೂಟರ್ ಮತ್ತು ಮೊಬೈಲ್ ‌ಸೇರಿ ಎಲೆಕ್ಟ್ರಾನಿಕ್ ಡಿವೈಸ್ ಮೂಲಕ ಹಣದ ವ್ಯವಹಾರ ನಡೆಸುವ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ಸರ್ಕಾರದ ನರ್ಧಿಸಿದೆ ಎಂದು ಹೇಳಿದರು.

ಪಂಚಾಯತ್ ರಾಜ್ ಡಿಲಿಮಿಟೇಷನ್ ಆ್ಯಕ್ಟ್‌ ತಿದ್ದುಪಡಿಗೆ ಸಹ ಸಂಪುಟ ನಿರ್ಧರಿಸಿದೆ. ಅಗತ್ಯ ಬಿದ್ದರೆ ಮಾತ್ರ ಡಿಲಿಮಿಟೇಷನ್ ಕಮಿಷನ್ ರಚನೆ ಮಾಡಲಾಗುವುದು ಎಂದರು.

ಇನ್ನು ವೀಕೆಂಡ್​ ಕರ್ಫ್ಯೂ ತೆಗೆಯಲು ಕೆಲ ಸಚಿವರಿಂದ ಸಲಹೆ ಕೇಳಿಬಂದಿದೆ ಎಂದ ಅವರು, ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ವಿಚಾರವಾಗಿ ನಾಳೆ (ಭಾನುವಾರ) ತಜ್ಞರ ಜತೆ ಸಭೆ ನಡೆಸಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅಂತಿಮ ನಿರ್ಧಾರ ತೆಗೆದುಕೊಳ್ಳುವರು ಎಂದು ತಿಳಿಸಿದರು.

ಕ್ಯಾಬಿನೆಟ್​ ನಿರ್ಣಯಗಳು: ರಾಜ್ಯ ಬೀಜ ನಿಗಮಕ್ಕೆ 10 ಕೋಟಿ ರೂ. ಸಾಲದ ಕ್ಯಾಷ್ ಕ್ರೆಡಿಟ್ ಸೌಲಭ್ಯ 20 ಕೋಟಿ ರೂ.ಗೆ ಹೆಚ್ಚಳಕ್ಕೆ ಸಂಪುಟದಲ್ಲಿ ಅನುಮತಿ. ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ 98.5 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ. ಹೇಮಾವತಿ ನಾಲೆಯಿಂದ 26 ಕೆರೆಗೆ ನೀರು ಬಿಡುವ ಯೋಜನೆಗೆ ಅಸ್ತು.

ಬಂಡವಾಳ ಹೂಡಿಕೆಗೆ ಸಮಾಲೋಚಕ ಪಾಲುದಾರರಾಗಿರುವ ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಸೇವೆ 12 ತಿಂಗಳು ಮುಂದುವರಿಕೆ. ಕೋವಿಡ್ ಹಿನ್ನೆಲೆ ಕಳೆದ ವರ್ಷ ಮುಂದೂಡಿದ್ದ ಹೂಡಿಕೆದಾರರ ಸಮಾವೇಶ ಈ ವರ್ಷ ನಡೆಯಲಿದೆ.

ಮೈಸೂರು ಅರಮನೆಯಲ್ಲಿ ಪೇಂಟ್ ಮತ್ತು ಫೋಟೋ ಸೆಷನ್ ಸಂಬಂಧ ಲೋಕಾಯುಕ್ತದಲ್ಲಿ 2 ಕೇಸ್ ದಾಖಲಾಗಿತ್ತು. ಈ ಪ್ರಕರಣಗಳಲ್ಲಿ ಅಷ್ಟೊಂದು ತೀವ್ರತೆ ಇಲ್ಲವೆಂಬ ಕಾರಣ ಎರಡೂ ಪ್ರಕರಣಗಳನ್ನು ಡ್ರಾಪ್ ಮಾಡಲು ಸಂಪುಟದಲ್ಲಿ ತೀರ್ಮಾನ.

ಫ್ಲ್ಯಾಷ್ ಇಲ್ಲದೆ ಫೋಟೋ ಶೂಟ್‌ಗೆ ಅವಕಾಶ ಇದೆ. ಹಾಗಾಗಿ ಮೈಸೂರು ಅರಮನೆ ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ವಿರುದ್ಧ ಇದ್ದ ಪ್ರಕರಣ ತಿರಸ್ಕರಿಸಲು ಸಂಪುಟದಲ್ಲಿ ತೀರ್ಮಾನಿಸಲಾಯಿತು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ