Please assign a menu to the primary menu location under menu

NEWSಕೃಷಿಶಿಕ್ಷಣ-

ರೈತರ ಮಕ್ಕಳು ಶಿಷ್ಯವೇತನ ಸೌಲಭ್ಯ ಪಡೆಯುವುದು ಹೇಗೆ….

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ರಾಜ್ಯ ಸರ್ಕಾರ ಹೊಸದಾಗಿ ಜಾರಿಗೊಳಿಸಿರುವ ರೈತ ಮಕ್ಕಳ ಶಿಷ್ಯವೇತನ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.

ರೈತ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ ಯೋಜನೆ ಜಾರಿಗೆ ತರಲಾಗಿದೆ. 10 ನೇ ತರಗತಿ ನಂತರ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಅರ್ಹ ಮಕ್ಕಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22 ನೇ ಆರ್ಥಿಕ ವರ್ಷದ ಸಾಲಿನಿಂದ ವಾರ್ಷಿಕ ಶಿಷ್ಯವೇತನ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ, ಪೋಷಕರು ಇಲ್ಲದೇ ಇದ್ದ ಸಂದರ್ಭದಲ್ಲಿ ಉಳುಮೆ ಮಾಡುವಂತಹ, ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರಬೇಕು. ಈ ರೈತರ ಮಕ್ಕಳು ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತಹ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ.

ಆದರೆ, ಮೆರಿಟ್,ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ‍್ಯಾಂಕ್ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ, ಪ್ರಶಸ್ತಿ, ಪ್ರತಿಫಲ ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ ಈ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

ರೈತರ ಮಕ್ಕಳ ತಂದೆ- ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ, ಈ ಯೋಜನೆಯಲ್ಲಿ ಒಂದು ಶಿಷ್ಯ ವೇತನಕ್ಕೆ ಮಾತ್ರ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತಕ್ಕದ್ದು.

ಕೋರ್ಸ್‍ನ ಸೆಮಿಸ್ಟರ್‍ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ ಪುನಃ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೆ (ಪುನಃ ಪರೀಕ್ಷೆ ತೆಗೆದುಕೊಂಡರೆ) ವಿದ್ಯಾರ್ಥಿಗಳು ಶಿಷ್ಯವೇತನ ಪಡೆಯಲು ಅರ್ಹರಾಗಿರುವುದಿಲ್ಲ.

ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‍ಗೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು.

ಪದವಿಯ ಮುಂಚೆ ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಕೋರ್ಸ್‌ ವಿದ್ಯಾರ್ಥಿಗಳಿಗೆ ರೂ.2,500/-, ವಿದ್ಯಾರ್ಥಿನಿಯರಿಗೆ ರೂ.3,000/-, ಬಿ.ಎ, ಬಿ.ಎಸ್ಸಿ, ಬಿ.ಕಾಂ ಇತ್ಯಾದಿ ಎಂ.ಬಿ.ಬಿ.ಎಸ್, ಬಿ.ಇ/, ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸ್‌ಗಳನ್ನು ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರೂ.5,000 ಹಾಗೂ ವಿದ್ಯಾರ್ಥಿನಿಯರಿಗೆ ರೂ.5,500.

ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳಿಗೆ ರೂ.7,500, ವಿದ್ಯಾರ್ಥಿನಿಯರಿಗೆ ರೂ.8,000, ಎಂ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಸ್ನಾತಕೋತ್ತರ ಕೋರ್ಸ್‌ಗಳನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ರೂ.10,000 ಹಾಗೂ ವಿದ್ಯಾರ್ಥಿನಿಯರಿಗೆ ರೂ. 11,000 ವಾರ್ಷಿಕ ಹಣ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿಯಾಗದೆ (ಈIಆ) ಇರುವಂತ ರೈತರು ಪಹಣಿ, ಆಧಾರ ಝರಾಕ್ಸ್, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಕೂಡಲೇ ರೈತ ಸಂಪರ್ಕ ಕೇಂದ್ರಗಳಿಗೆ ನೀಡಿ ಈIಆ ಮಾಡಿಸಿಕೊಂಡು ಈ ಅನುಕೂಲ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...