NEWSನಮ್ಮಜಿಲ್ಲೆರಾಜಕೀಯ

ನಾನು ಯಾವುದೇ ಬ್ಲಾಕ್‌ಮೇಲ್‌ಗೆ ಹೆದರುವುದಿಲ್ಲ : ಶಾಸಕ ಸಾ.ರಾ.ಮಹೇಶ್‌ ತಿರುಗೇಟು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬಿಜೆಪಿ ಎಂಎಲ್‌ಸಿ ಎಚ್‌.ವಿಶ್ವನಾಥ್‌, ಮನೀಶ್‌ ಮೌದ್ಗಿಲ್, ರೋಹಿಣಿ ಸಿಂಧೂರಿ ಅವರೇ ಚೈನ್‌ ಹಿಡಿದು ಸರ್ವೇ ಮಾಡಲಿ. ನಾನು ಯಾವುದೇ ಬ್ಲಾಕ್‌ಮೇಲ್‌ಗೆ ಹೆದರುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್‌ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿಯಾಗಲಿ, ಮನೀಶ್ ಮೌದ್ಗಿಲ್ ಆಗಲಿ ನನ್ನನ್ನು ಬ್ಲಾಕ್ ಮೇಲ್ ಮಾಡಿ ಹೆದರಿಸಲು ಸಾಧ್ಯವಿಲ್ಲ. ನಾನು ಯಾವುದೇ ಬ್ಲಾಕ್ ಮೇಲ್‌ಗೂ ಹೆದರುವುದಿಲ್ಲ ಎಂದು ಹೇಳಿದರು.

ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರದ ನಡುವೆ ನಡೆಯುತ್ತಿರುವ ಹೋರಾಟವನ್ನು ನಾನು ಇಲ್ಲಿಗೆ ನಿಲ್ಲಿಸುವುದಿಲ್ಲ. ನನ್ನ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ. ನನ್ನ ಇದುವರೆಗಿನ ಸಾರ್ವಜನಿಕ ಬದುಕಿನಲ್ಲಿ ಎಂದೂ ಕೂಡ‌‌ ಕಿಕ್ ಬ್ಯಾಕ್ ಪಡೆದಿಲ್ಲ.

ನನ್ನ ವಿರುದ್ಧ ಮಾಡಿರುವ ಆರೋಪಗಳಲ್ಲಿ ಒಂದನ್ನು ಸಾಬೀತು ಮಾಡಿದರೂ ಕೂಡ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕ ಬದುಕಿನಿಂದ ದೂರವಾಗುತ್ತೇನೆ. ಬೇರೆಯವರನ್ನು ಬ್ಲಾಕ್ ಮೇಲ್ ಮಾಡಬಹುದು, ಆದರೆ ನನ್ನನ್ನು ಬ್ಲಾಕ್ ಮೇಲ್ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜಕಾಲುವೆ, ಗೋಮಾಳದ ಒಂದೇ ಒಂದು ಗುಂಟೆ ಒತ್ತುವರಿ ಆಗಿದ್ದರೆ ಚೆಕ್ ಮಾಡಿ ಬನ್ನಿ. ನಾನೇ ನಿಮಗೆ ಬೊಕ್ಕೆ ನೀಡಿ ಸರ್ವೇಗೆ ಸ್ವಾಗತಿಸುತ್ತೇನೆ. ನಿಮ್ಮ ಶಿಷ್ಯೆನೋ, ಜ್ಯೂನಿಯರ್ ಇದ್ದಾರಲ್ಲ ಅವರು ಆಸ್ತಿ ಘೋಷಣೆ ಮಾಡಿದ್ದಾರಾ ಮನೀಷ್ ಮುದ್ಗಲ್ ಅವರೇ? ಕಾನೂನಿನಲ್ಲಿ ಅವಕಾಶ ಇದ್ದರೂ ಶಿಷ್ಯೆಗಾಗಿ ಸರ್ವೇಗೆ ಆದೇಶ ಮಾಡಿದ್ದೀರಿ. ನಿಮ್ಮ ಕುಚುಕು ಶಿಷ್ಯೆಗಾಗಿ ಆದೇಶ ಮಾಡಿದ್ದೀರಿ ಎಂದು ಶಾಸಕರು ವಾಗ್ದಾಳಿ ನಡೆಸಿದ್ದಾರೆ.

ಸಾರಾಗೆ ಭೂ ಕಂಟಕ:
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿಕ್‍ಬ್ಯಾಕ್ ಆರೋಪ ಮಾಡಿದ್ದ ಶಾಸಕ ಸಾ.ರಾ ಮಹೇಶ್‍ಗೆ ಮತ್ತೆ ಭೂಕಂಟಕ ಎದುರಾದಂತೆ ಇದೆ.

ಮೈಸೂರು-ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತನಿಖೆಗೆ ಹೊಸ ತಂಡ ರಚಿಸಿ ಭೂಕಂದಾಯ ಇಲಾಖೆ ಆಯುಕ್ತ ಮನಿಷ್ ಮೌದ್ಗಿಲ್ ಆದೇಶ ಹೊರಡಿಸಿದ್ದರು.

ಕೇರಗಳ್ಳಿಯ ಸರ್ವೇ ನಂಬರ್ 115, ಯಡಹಳ್ಳಿಯ ಸರ್ವೇ ನಂಬರ್ 69,72, ದಟ್ಟಗಳ್ಳಿಯ ಸರ್ವೇ ನಂಬರ್ 130/3, ಲಿಂಗಾಬುದಿ ಸರ್ವೇ ನಂಬರ್ 10ರಲ್ಲಿ ನಡೆದ ಭೂಒತ್ತುವರಿಗಳ ತನಿಖೆ ನಡೆಸಿ 10 ದಿನದಲ್ಲಿ ವರದಿ ನೀಡಲು ಸೂಚಿಸಿದ್ದಾರೆ.

ದಟ್ಟಗಳ್ಳಿ ಮತ್ತು ಲಿಂಗಾಬುದಿ ಸರ್ವೇ ನಂಬರ್ ಗಳಲ್ಲಿ ಸಾರಾ ಮಹೇಶ್ ಒಡೆತನದ ತೋಟ, ಕಲ್ಯಾಣ ಮಂಟಪ ಇದೆ. ಹೀಗಾಗಿ ಸಹಜವಾಗಿಯೇ ಇವುಗಳ ಸರ್ವೇ ಕೂಡ ನಡೆಯಲಿದೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ