NEWSಕೃಷಿನಮ್ಮಜಿಲ್ಲೆ

ರೈತ ಮಕ್ಕಳಿಗೆ ವಿದ್ಯಾನಿಧಿ ಸಹಕಾರಿ: ಶಾಸಕ ಕೆ.ಮಹದೇವ್ ಅಭಿಮತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಭಾರತ ಸರ್ಕಾರ ರೈತ ವಿದ್ಯಾನಿಧಿ ಕಾರ್ಯಕ್ರಮದ ಮೂಲಕ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು.

ತಾಲೂಕಿನ ಹುಣಸವಾಡಿ, ಬೆಟ್ಟದಪುರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಡಿಯೋ ಕಾನ್ಪರೆನ್ಸ್ ವೀಕ್ಷಣೆ ಹಾಗೂ ರೈತರಿಗೆ ರಾಗಿ ಬೆಳೆ ಕುರಿತ ಪ್ರಾತಿಕ್ಷತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ನಿಟ್ಟಿನಲ್ಲಿ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಹೆಮ್ಮಯ ಸಂಗತಿಯಾಗಿದೆ.

ಆ ಮೂಲಕ ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚೆಕ್ ಮೂಲಕ ವಿದ್ಯಾರ್ಥಿ ವೇತನವನ್ನು ಹಸ್ತಾಂತರ ಮಾಡಲಾಗುತ್ತಿದ್ದು ಇದರ ಉಪಯೋಗವನ್ನು ರೈತರ ಮಕ್ಕಳು  ಪಡೆದುಕೊಳ್ಳಬೇಕು ಎಂದರು.

ವೈಜ್ಞಾನಿಕವಾಗಿ ರಾಗಿ ಬೆಳೆಯಿರಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಮಾತನಾಡಿ, ರೈತರು ಕೃಷಿಯಲ್ಲಿ ಹಳೆಯ ಪದ್ಧತಿಗಳನ್ನು ಕೈಬಿಟ್ಟು ಆಧುನೀಕ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು.

ತಂತ್ರಜ್ಞಾನ ಬೆಳೆದಂತೆ ಕೃಷಿ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು ಮತ್ತು ಬದಲಾವಣೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರು ಉತ್ತಮ ಇಳುವರಿ ಹಾಗೂ ಆರ್ಥಿಕ ಭದ್ರತೆಗಾಗಿ ವೈಜ್ಞಾನಿಕ ಪದ್ದತಿಯಲ್ಲಿ ವ್ಯವಸಾಯದ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಭೂಮಿಯ ಹವಾಗುಣಕ್ಕೆ ಹೊಂದಿಕೊಳ್ಳುವಂತ ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕಗಳನ್ನು  ಸಿಂಪಡಿಸಿ ಉತ್ತಮ ಇಳುವರಿ ಪಡೆದು ಆರ್ಥಿಕವಾಗಿ ರೈತರು ಅಭಿವೃದ್ಧಿ ಹೊಂದಬೇಕು. ಪಿರಿಯಾಪಟ್ಟಣ ತಾಲೂಕಿನಲ್ಲಿ   ಪ್ರತೀ ವರ್ಷ ಹೆಚ್ಚಾಗಿ ರೈತರು ರಾಗಿ ಬೆಳೆಯಲು ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು ಆರ್ಥಿಕವಾಗಿ ಸಬಲರಾಗಲು ಮಾರ್ಗೋಪಾಯ ಕಂಡುಕೊಂಡಿರುವುದು ಹೆಮ್ಮಯ ಸಂಗತಿ  ಎಂದರು.

ಕೃಷಿ ಅಧಿಕಾರಿ ಮಹೇಶ್, ವಿಕಾಶ್, ಹಿತೈಶ್, ಧನಂಜಯ್, ಗ್ರಾ.ಪಂ.ಅಧ್ಯಕ್ಷೆ ಸುವರ್ಣ ಗಣೇಶ್, ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಮಡರಾದ ಬಿಟಿಎಂ ಅಶೋಕ್, ಶಾಂತೇಗೌಡ, ಗೋವಿಂದೇಗೌಡ, ರಘುನಾಥ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ