CrimeNEWS

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಸಾವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ  ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬ ಮೃತಪಟ್ಟಿರುವ  ಘಟನೆ ವಿಶ್ವೇಶ್ವರಯ್ಯ ಲೇಔಟ್ 4ನೇ ಹಂತ ಮಂಗನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಖುರ್ಷಿದ್ ಅಹಮ್ಮದ್ (60) ಮೃತರು.  ಹರಿಯಾಣ ಮೂಲದವರಾಗಿದ್ದು, ಜಯನಗರದಲ್ಲಿ ನೆಲೆಸಿದ್ದಾರೆ. ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಅವಘಡ ಸಂಭವಿಸಿದೆ.  ಈ ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ಘಟನೆ ನಡೆದ ಸ್ಥಳ ಪಾಲಿಕೆ ವ್ಯಾಪ್ತಿಗೆ ಬರಲ್ಲ. ಬದಲಾಗಿ ಇದು ಬಿಡಿಎ ವ್ಯಾಪ್ತಿಗೆ ಬರಲಿದೆ. ಬಿಡಿಎ ವಿಶ್ವೇಶ್ವರಯ್ಯ ಲೇಔಟ್ ಸಂಬಂಧಿತ ಎಂಬ ಮಾಹಿತಿ ಇದೆ. ಹೀಗಾಗಿ ಆ ಇಲಾಖೆ ಪ್ರಾಥಮಿಕ ವರದಿ ಆಧರಿಸಿ ಕ್ರಮದ ಬಗ್ಗೆ ತೀರ್ಮಾನ ಅವರೇ ಮಾಡಬೇಕಿದೆ ಎಂದು  ಬಿಬಿಎಂಪಿ ಮುಖ್ಯ ಅಭಿಯಂತರ ಪ್ರಹ್ಲಾದ್ ಪ್ರತಿಕ್ರಿಯಿಸಿದ್ದಾರೆ.

ಇತ್ತ ಸಿಎಂ ನಗರದಲ್ಲಿ ರಸ್ತೆ ಗುಂಡಿಗೆ ಅಂಗವಿಕಲನ ಬಲಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಬಗ್ಗೆ ಮೊನ್ನೆ ಸಭೆಯಲ್ಲಿ ಸೂಚಿಸಲಾಗಿದೆ. ಸದ್ಯ ಮಳೆ ಇದೆ, ಮಳೆ ಕಮ್ಮಿಯಾದ ಮೇಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ವಾರ್ ಫೂಟ್ ನಲ್ಲಿ ಮಾಡ್ತೇವೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ