ನ್ಯೂಡೆಲ್ಲಿ: 2018ರಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ನಿರ್ದೇಶಕರನ್ನಾಗಿ ಸಂಜಯ್ಮಿಶ್ರಾ ಅವರನ್ನು ನೇಮಕ ಮಾಡಿರುವ ಆದೇಶದಲ್ಲಿನ ಪೂರ್ವಾನ್ವಯ ಬದಲಾವಣೆಯನ್ನು ಪ್ರಶ್ನಿಸಿ ಸಲ್ಲಿ ಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠ, ಅಪರೂಪ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ನಿವೃತ್ತಿಯ ವಯಸ್ಸು ಸಮೀಪಿಸಿದ ಅಧಿಕಾರಿಗಳ ಅಧಿಕಾರ ಅವಧಿಯನ್ನು ವಿಸ್ತರಿಸಬಹುದು ಎಂದು ತಿಳಿಸಿದೆ.
ಶರ್ಮಾ ಅವರ ಅಧಿಕಾರ ಅವಧಿಯನ್ನು ಎರಡು ವರ್ಷಗಳಿಂದ ಮೂರು ವರ್ಷಕ್ಕೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಮತ್ತೆ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಪಪಡಿಸಿದೆ.
ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿ ಸಂಜಯ್ಕುಮಾರ್ ಮಿಶ್ರಾ ಅವರನ್ನು ನವೆಂಬರ್ 19, 2018 ರಂದು ಜಾರಿ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು .
ನಂತರ ನ. 13, 2020ರಂದು ಆದೇಶವನ್ನು ಪರಿಷ್ಕರಿಸಿ, ಆ ಎರಡು ವರ್ಷಗಳ ಅವಧಿಯನ್ನು ಮೂರು ವರ್ಷಗಳಿಗೆ ವಿಸ್ತರಿಸಲಾಗಿತ್ತು.
ಮಿಶ್ರಾ ಅವರ ನೇಮಕಾತಿಯಲ್ಲಿ ಮಾಡಲಾಗಿದ್ದ ಈ ಪೂರ್ವಾನ್ವ ಯ ಬದಲಾವಣೆಯನ್ನು ಪ್ರಶ್ನಿಸಿ ಕಾಮನ್ ಕಾಸ್ ಸ್ವಯಂಸೇವಾ ಸಂಸ್ಥೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತು.