Please assign a menu to the primary menu location under menu

NEWSನಮ್ಮಜಿಲ್ಲೆಶಿಕ್ಷಣ-

ಬೆಂ.ಗ್ರಾಮಾಂತರ: ಜಿಲ್ಲೆಯಲ್ಲಿ ಸಾಕ್ಷರತೆ ಶೇ.100 ಪ್ರಗತಿ ಸಾಧಿಸಿ: ಡಿಸಿ ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ವಯಸ್ಕ ಶಿಕ್ಷಣದ ಮೂಲಕ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ, ಸಾಕ್ಷರರನ್ನಾಗಿಸಬೇಕು ಹಾಗೂ ಜಿಲ್ಲೆಯಲ್ಲಿ ಶೇ. 100 ರಷ್ಟು ಸಾಕ್ಷರತೆಯನ್ನು ಸಾಧಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಹಾಗೂ ಎನ್‌.ಎಸ್.ಎಸ್ ಸಹಯೋಗದಲ್ಲಿಂದು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಎಲ್ಲರಿಗೂ ಶಿಕ್ಷಣ ದೊರೆಯಬೇಕು ಈ ನಿಟ್ಟಿನಲ್ಲಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 1,96,006 ಮಂದಿ ಅನಕ್ಷರಸ್ಥರಿದ್ದು, ಇವರಲ್ಲಿ ಪ್ರಸ್ತುತ 1,15,910 ಮಂದಿ ನವ ಸಾಕ್ಷರರಾಗಿದ್ದಾರೆ, ಬಾಕಿ ಉಳಿದಿರುವ 80,093 ಅನಕ್ಷರಸ್ಥರಿಗೂ ಸಂಜೆ ವೇಳೆಯಲ್ಲಿ ದಿನಕ್ಕೆ ಎರಡು ಗಂಟೆಗಳ ಅವಧಿಯಲ್ಲಿ ಶಿಕ್ಷಣ ನೀಡುವ ಮೂಲಕ ಶೀಘ್ರವೇ ಅವರನ್ನು ನವ ಸಾಕ್ಷರರನ್ನಾಗಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಶಾಲೆ, ಅಂಗನವಾಡಿ, ಅನಕ್ಷರಸ್ಥರ ಮನೆ, ಬೋಧಕರ ಮನೆ ಹಾಗೂ ಸಮುದಾಯ ಭವನಗಳಂತಹ ಅನುಕೂಲಕರ ಸ್ಥಳದಲ್ಲಿ ಬೋಧನೆ ಮಾಡಲಾಗುವುದು ಹಾಗೂ ಬಾಳಿಗೆ ಬೆಳಕು ಪುಸ್ತಕದ ಮೂಲಕ ಓದು, ಬರಹ ಹಾಗೂ ಸರಳ ಲೆಕ್ಕಾಚಾರ ಎಂಬ ಮೂರು ವಿಭಾಗಗಳಲ್ಲಿ ಸುಮಾರು 24 ಪಾಠಗಳನ್ನು ಕಲಿಸಿ, ಪರೀಕ್ಷೆ ನಡೆಸಲಾಗುತ್ತದೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಶ್ರೇಣಿ ಸಹಿತ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಕ್ಷರತಾ ಪ್ರಮಾಣ ವಚನ ಸ್ವೀಕರಿಸಲಾಯಿತು. ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹನುಮಂತಪ್ಪ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷ್ಮೀ, ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ವಿಶ್ವನಾಥಪುರ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಕ ರಮೇಶ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...