NEWSನಮ್ಮಜಿಲ್ಲೆ

ಬಿಬಿಎಂಪಿ: ರಸ್ತೆ ಗುಂಡಿಗಳ ಮುಚ್ಚುವ ಕಾರ್ಯಕ್ಕೆ ಇನ್ನಷ್ಟು ವೇಗ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆ, ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲಾಗುತ್ತಿದ್ದು, ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.

ಮೈಸೂರು ರಸ್ತೆ ನಾಯಂಡಹಳ್ಳಿ ಜಂಕ್ಷನ್ ಬಳಿ ನಾಗರಭಾವಿ ಸರ್ವೀಸ್ ರಸ್ತೆಯಿಂದ ನಾಯಂಡಹಳ್ಳಿ ರಿಂಗ್ ರಸ್ತೆ ಕಡೆ ಬರುವ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ ಮಳೆ ಬಿದ್ದಾಗ ಗುಂಡಿಗಳಲ್ಲಿ ನೀರು ತುಂಬಿ ವಾಹನ ಸಂಚಾರದ ವೇಳೆ ಸಂಚಾರ ದಟ್ಟಣೆಯಾಗುತ್ತಿದೆ.

ಇದರಿಂದ ವಾಹನ ಸವಾರರಿಗೆ ಹೆಚ್ಚು ಸಮಸ್ಯೆ ಆಗಲಿದ್ದು, ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ಅಧಿಕಾರಿಗಳು ಕೋರಿದ್ದರು.

ಅದರಂತೆ ಪಾಲಿಕೆಯ ಸಂಚಾರಿ ಇಂಜಿನಿಯರಿಂಗ್ ವಿಭಾಗವು ಕೂಡಲೆ ಕ್ರಮ ಕೈಗೊಂಡು ಗುರುವಾರ ತಡರಾತ್ರಿ ಅಗತ್ಯ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ನಿಯೋಜನೆ ಮಾಡಿಕೊಂಡು ದುರಸ್ತಿ ಕಾಮಗಾರಿ ನಡೆಸಿ ಶುಕ್ರವಾರ ಬೆಳಗ್ಗೆ 2.30ರ ವೇಳೆಗೆ ಡಾಂಬರು ಹಾಕಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ದುರಸ್ತಿ ಕಾಮಗಾರಿ ವೇಳೆ ಪಾಲಿಕೆ ಇಂಜಿನಿಯರ್, ಸಂಚಾರಿ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ರಸ್ತೆ ಮೇಲೆ ನೀರು ನಿಲ್ಲದಂತೆ ಶೋಲ್ಡರ್ ಡ್ರೈನ್ ಮೂಲಕ ರಾಜಕಾಲುವೆಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಡಾಂಬರನ್ನು ಅಳವಡಿಸಲಾಗಿದೆ.

ಪಾಲಿಕೆಯ ಎಂಟೂ ವಲಯಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು ಇಂದು ಜರಗನಹಳ್ಳಿ, ಬನಶಂಕರಿ 2ನೇ ಹಂತ, ಎಚ್.ಎಂ.ಟಿ ಲೇಔಟ್, ಯಡಿಯೂರು, ಬೆಳ್ಳಂದೂರು, ಸಿದ್ದಣ್ಣ ಲೇಔಟ್, ತಿಗರಳ ಪಾಳ್ಯ(ಹೂಡಿ).

ನ್ಯೂ ಬಿ.ಇ.ಎಲ್ ರಸ್ತೆ, ಭೂಪಸಂದ್ರ, ಹೆಬ್ಬಾಳ ಮುಖ್ಯ ರಸ್ತೆ ಸೇರಿದಂತೆ ಇನ್ನಿತರ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಲಾಗಿದ್ದು, ಹಾಗೂ ನಗರದ ಎಲ್ಲ ಕಡೆ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ