NEWSಕೃಷಿದೇಶ-ವಿದೇಶ

ಭಾರಿ ಮಳೆ ನಡುವೆಯೇ ನೀರಿನಲ್ಲೇ ಕುಳಿತು ಪ್ರತಿಭಟನೆ ನಡೆಸಿದ ರಾಕೇಶ್ ಟಿಕಾಯತ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು , ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದರ ನಡುವೆ ಭಾರತೀಯ ಕಿಸಾನ್ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅವರು ಬೆಂಬಲಿಗರೊಂದಿಗೆ ಗಾಜಿಪುರದಲ್ಲಿ ಜಲಾವೃತವಾದ ಫ್ಲೈ ಓವರ್ ಬಳಿ ಮಳೆ ನೀರಿನಲ್ಲೇ ಕುಳಿತು ಧರಣಿ ನಡೆಸಿದ್ದಾರೆ.

ಶನಿವಾರ ಸುರಿದ ಮಳೆಯಿಂದಾಗಿ ದೆಹಲಿ –ಉತ್ತರ ಪ್ರದೇಶ ಗಡಿ ಪ್ರದೇಶದಲ್ಲಿ ತಾತ್ಕಾ ಲಿಕವಾಗಿ ನಿರ್ಮಿಸಿದ್ದ ಟೆಂಟ್ಗಳು ಹಾನಿಗೊಳಗಾಗಿವೆ.

ರಾಕೇಶ್ ಟಿಕಾಯತ್ ಅವರು ನೀರು ತುಂಬಿರುವ ರಸ್ತೆಯಲ್ಲಿ ಕುಳಿತು ಪ್ರ ತಿಭಟನೆಮುಂದುವರಿಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಮಳೆ ನೀರು ಮತ್ತು ಚರಂಡಿಗಳನ್ನು ಸ್ವಚ್ಛ ಗೊಳಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಇದರ ಗಮನ ಹರಿಸುತ್ತಿಲ್ಲ ’ ಎಂದು ಬಿಕೆಯುನ ಮಾಧ್ಯಮ ಉಸ್ತುವಾರಿ ಧರ್ಮೇಂದ್ರ ಮಲಿಕ್ ಆರೋಪಿಸಿದ್ದಾರೆ.

ಈಗ ಪ್ರ ತಿಭಟಿಸುತ್ತಿರುವ ರೈತರು ಎಲ್ಲಾ ಮೂರು ಋತುಗಳನ್ನು (ಚಳಿಗಾಲ, ಬೇಸಿಗೆ ಮತ್ತು ಮಳೆ) ನೋಡಿದ್ದಾರೆ. ನಾವು ಈಗಯಾವುದಕ್ಕೂ ಹೆದರುವುದಿಲ್ಲ ಮಲಿಕ್ ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇ ಶಿಸಿರುವಮೂರು ಕೃಷಿ ಕಾಯ್ದೆ ಗಳನ್ನು ವಿರೋಧಿಸಿ ಹರಿಯಾಣ, ಪಂಜಾಬ್, ಉತ್ತರಪ್ರದೇಶ ಸೇರಿದಂತೆ ಹಲವು ರಾಜ್ಯ ಗಳ ರೈತರು ದೆಹಲಿಯ ಗಡಿ ದೇಶಗಳಲ್ಲಿ ಕಳೆದ ನವೆಂಬರ್ನಿಂದ ಪ್ರ ತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರೊಂದಿಗೆ ಕೇಂದ್ರ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದೆ. ಆದರೆ ರೈತರು ತಮ್ಮ ಬೇಡಿಕೆಗೆ ವಿರುದ್ಧವಾದ ಸರ್ಕಾರದ ನಡೆಗೆ ನಾವು ಒಪ್ಪುವುದಿಲ್ಲ ಎಂದು ಹೇಳಿದೆ. ಹೀಗಾಗಿ 11 ಬಾರಿ ನಡೆದ ಸಂಧಾನ ಸಭೆ ಯಾವುದೇ ಪ್ರಯೋಜನವಾಗದೆ ಅಂತ್ಯಕಂಡಿದೆ.

ಈ ನಡುವೆ ಸರ್ಕಾರವೂ ಕೂಡ ತನ್ನ ನಡೆ ಏನೆಂದು ಸ್ಪಷ್ಟಪಡಿಸುವಲ್ಲಿ ಬಹುತೇಕ ವಿಫಲವಾಗಿದ್ದು, ರೈತರ ಸಮಸ್ಯೆ ಆಲಿಸುವಷ್ಟು ಪುರುಸೊತ್ತಿಲ್ಲ ಎಂಬಂತೆ ವರ್ತಿಸುತ್ತಿದೆ. ಇದು ರೈತರ ಪ್ರತಿಭಟನಾಹೋರಾಟದ ಕಿಚ್ಚು ಇನ್ನಷ್ಟು ಹೆಚ್ಚಾಗಲು ಕಾರಣವಾಗುತ್ತಿದೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ