NEWSನಮ್ಮರಾಜ್ಯರಾಜಕೀಯ

ಎಚ್‌ಡಿಕೆ ತೋಟದ ಮನೆಗೆ ಸಚಿವ ಆರ್‌.ಅಶೋಕ್‌ ಭೇಟಿ: ಕುತೂಹಲ ಕೆರಳಿಸಿದ ಮಾಜಿ ಸಿಎಂ ಜತೆಗಿನ ಚರ್ಚೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

 

ರಾಮನಗರ: ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಕೋರಿ ಕಂದಾಯ ಸಚಿವ ಆರ್. ಅಶೋಕ್ ಕಿಂಗ್ ಮೇಕರ್ ಜೆಡಿಎಸ್ ರಾಜ್ಯ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಬಿಡದಿಯ ಕೇತುಗಾನಹಳ್ಳಿ ತೋಟದ ಮನೆಯಲ್ಲಿ ನಿನ್ನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕಲಬುರಗಿ ಪಾಲಿಕೆ ಚುನಾವಣೆಗೆ ನಮ್ಮ ಪಕ್ಷಕ್ಕೆ ಬೆಂಬಲ ಕೊಡುವಂತೆ ಕೋರಿದ್ದೇನೆ. ಇದಕ್ಕೆ ಕುಮಾರಸ್ವಾಮಿ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅಶೋಕ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಕಲಬುರಗಿ ಪಾಲಿಕೆ ಬೆಂಬಲದ ಬಗ್ಗೆ ಕುಮಾರಸ್ವಾಮಿ ಸೋಮವಾರ ಸದನದಲ್ಲಿ ಚರ್ಚಿಸೊಣ ಎಂದಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜತೆಗೆ ಚರ್ಚಿಸಿ ಒಂದೊಳ್ಳೆ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಹಾಗೆಯೇ ದೊಡ್ಡಬಳ್ಳಾಪುರದ ಚುನಾವಣೆ ವಿಷಯದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕಲಬುರಗಿ ಪಾಲಿಕೆ ಚುಕ್ಕಾಣಿಗೆ ಜೆಡಿಎಸ್- ಕಾಂಗ್ರೆಸ್‌ಗೆ ಬೆಂಬಲ ಕೊಟ್ಟಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅಶೋಕ್, ಹಾಗೇನು ಇಲ್ಲ, ಕಾಂಗ್ರೆಸ್‌ನಲ್ಲೇ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಲ್ಲೇ ಒಮ್ಮತವಿಲ್ಲ. ಮೇಯರ್ ಪಟ್ಟದ ಡಿಮ್ಯಾಂಡ್ ಕೂಡ ಚರ್ಚೆಯಾಗಿಲ್ಲ ಎಂದರು.

ಇನ್ನು ಸಚಿವ ಅಶೋಕ್ ಭೇಟಿಯ ಬಗ್ಗೆ ಟ್ವಿಟ್ ಮಾಡಿದ ಮಾಜಿ ಸಿಎಂ ಎಚ್‌ಡಿಕೆ, ಹಿರಿಯ ಸಚಿವ ಆರ್.ಅಶೋಕ್ ಅವರು ಶನಿವಾರ ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು.

ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ.

ಪ್ರಸ್ತುತ, ರಾಜ್ಯದ ರೈತಾಪಿ ಜನ ಎದುರಿಸುತ್ತಿರವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಶಾಸಕ ಸಾ.ರಾ.ಮಹೇಶ್ ಇದ್ದರು ಎಂದು ಟ್ವೀಟ್‌ ಮಾಡಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ