Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ 48 ಗಂಟೆಯೊಳಗೆ ಸಿಗಲಿದೆಯೇ ಸಿಹಿ ಸುದ್ದಿ?: ಅಧಿಕಾರಿಗಳ ಸಭೆ ಬಳಿಕ ಸಚಿವ ಶ್ರೀರಾಮುಲು ಹೇಳಿದ್ದೇನು!?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಇಲಾಖೆ ನೌಕರರ ಹಿತಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಮ್ಮ ಎಲ್ಲ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ನಮ್ಮ ನೌಕರ-ಸಿಬ್ಬಂದಿ ವರ್ಗದವರ ಹಿತದೃಷ್ಟಿಯಿಂದ ಮಹತ್ವದ ಸಭೆ ನಡೆಸಿದೆ. ಅತಿಶೀಘ್ರದಲ್ಲಿ ಮಹತ್ವದ ನಿರ್ಧಾರಕ್ಕೆ ಬರಲಿದ್ದೇವೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗದುಕೊಂಡಿರುವುದಾಗಿ ಅವರು ತಿಳಿಸಿದ್ದು, ಮುಷ್ಕರದ ಸಮಯದಲ್ಲಿ ವಜಾ, ವರ್ಗಾವಣೆ, ಅಮಾನತು ಮತ್ತು ಪೊಲೀಸ್‌ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ನೌಕರರಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಅದಂತೆ ಸೆಪ್ಟೆಂಬರ್‌ 14 ಅಥವಾ 15ರಂದೇ ಈ ಎಲ್ಲ ಪ್ರಕರಣಗಳನ್ನು ವಾಪಸ್‌ ಪಡೆಯುವ ಬಗ್ಗೆ ಅಧಿಕೃತವಾಗಿ ಘೊಷಣೆ ಮಾಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಸಾರಿಗೆ ನೌಕರರ ಮೊಗದಲ್ಲಿ ಮಂದಹಾಸ ಮರುಕಳಿಸುತ್ತಿದೆ.

ಸಚಿವರು ಹೋದ ಕಡೆ ಅವರನ್ನು ಭೇಟಿ ಮಾಡಿ, ಮುಷ್ಕರದ ವೇಳೆ ವಜಾ, ಅಮಾನತು, ವರ್ಗಾವಣೆ ಮತ್ತು ಪೊಲೀಸ್‌ ಪ್ರಕರಣಗಳಾಗಿರುವುದನ್ನು ವಾಪಸ್‌ ಪಡೆದು ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೂಟದ ಪದಾಧಿಕಾರಿಗಳು ಮನವಿ ಮಾಡಿಕೊಂಡು ಬಂದಿದ್ದರು.

ಅದಕ್ಕೆ ಸಕರಾತ್ಮಕವಾಗಿ ಪ್ರತಿಕ್ರಿಯಿಸುತ್ತಲೆ ಬಂದಿದ್ದ ಸಚಿವ ಶ್ರೀರಾಮುಲು, ನಾವು ಎಲ್ಲಿ ಹೋಗುತ್ತೇವೋ ಅಲ್ಲೆಲ್ಲ ಪದೇಪದೆ ನಮ್ಮನ್ನು ಭೇಟಿ ಮಾಡಲು ಬರುತ್ತಿದ್ದೀರ, ಹೀಗಾಗಿ ನಿಮ್ಮ ಸಮಸ್ಯೆ ನನಗೆ ಅರ್ಥವಾಗಿದೆ. ಇನ್ನು ಮುಂದೆ ಹೀಗೆ ಭೇಟಿ ಮಾಡಲು ಬರಬೇಡಿ ಆದಷ್ಟು ಶೀಘ್ರದಲ್ಲೇ ನಿಮ್ಮ ಎಲ್ಲ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.

ಅಲ್ಲದೆ ಈ ಸಂಬಂಧ ಸಾರಿಗೆಯ ನಾಲ್ಕೂ ನಿಗಮಗಳ ಎಂಡಿಗಳೊಂದಿಗೆ ಚರ್ಚಿಸಲಿದ್ದೇನೆ. ಜತೆಗೆ ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಒಂದು ಶಾಶ್ವತವಾದ ಪರಿಹಾರಕ್ಕಾಗಿ ಈ ರೀತಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದರು.

ಅದರಂತೆ ಇಂದು ಸಾರಿಗೆ ಅಧಿಕಾರಿಗಳ ಸಭೆ ಕರೆದು ಚರ್ಚಿಸಿದ್ದು ಅಧಿಕಾರಿಗಳು ಕೂಟ ಸಚಿವ ಸಲಹೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಳೆ ಸಂಜೆಯೊಳಗೆ ಒಂದು ಒಳ್ಳ ಸುದ್ದಿ ನೌಕರರಿಗೆ ಸಿಗುವ ವಿಶ್ವಾಸವಿದೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.

1 Comment

Leave a Reply

error: Content is protected !!
LATEST
ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ